ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020
ಬಂದೋಬಸ್ತ್ ಡ್ಯೂಟಿಗೆ ಬಂದಿರುವ ಐಪಿಎಸ್ ಅಧಿಕಾರಿಯೊಬ್ಬರ ಕಾರು ಟಿವಿಎಸ್ ಮೊಪೆಡ್ ಬೈಕ್‍ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ಸಾಗರ ರಸ್ತೆಯಲ್ಲಿ ಬರುತ್ತಿದ್ದ ಐಪಿಎಸ್ ಅಧಿಕಾರಿ ಭೀಮಾ ಶಂಕರ್ ಗುಳೇದ್ ಅವರ ಕಾರು ಆಲ್ಕೊಳ ಸರ್ಕಲ್‍ನಲ್ಲಿ ಟಿವಿಎಸ್ ಎಕ್ಸೆಲ್ ಮೊಪೆಡ್‍ಗೆ ಡಿಕ್ಕಿಯಾಗಿದೆ. ಮೊಪೆಡ್ ಬೈಕು ದಿಢೀರನೆ ಸಾಗರ ರಸ್ತೆಗೆ ಬಂದಿದ್ದರಿಂದ ಅಪಘಾತ ಸಂಭವಿಸಿದೆ.
ಮೊಪೆಡ್‍ನಲ್ಲಿ ಗಂಡ, ಹೆಂಡತಿ, ಮಕ್ಕಳು ಸೇರಿ ಐವರು ಇದ್ದರು ಹೇಳಲಾಗುತ್ತಿದೆ. ಐವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸಿಐಡಿ ಎಸ್‍ಪಿ ಭೀಮಾಶಂಕರ್ ಗುಳೇದ್ ಅವರ ಕಾರಿನ ಮುಂಭಾಗ ಜಖಂ ಆಗಿದೆ. ಪಶ್ಚಿಮ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
