ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020
ಕರೋನ ಲಾಕ್ ಡೌನ್ ಅವಧಿಯಲ್ಲಿಯೂ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ದಾಖಲೆ ಪ್ರಮಾಣದಲ್ಲಿ ಲಾಭ ಗಳಿಸಿದೆ. ಅಲ್ಲದೆ ಪ್ರತಿ ತಾಲೂಕಿನಲ್ಲೂ ಎಟಿಎಂ ಸ್ಥಾಪನೆ, ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ದಾಖಲೆ ಪ್ರಮಾಣದ ಲಾಭ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಪ್ರಸಕ್ತ ಸಾಲಿನಲ್ಲಿ ಡಿಸಿಸಿ ಬ್ಯಾಂಕ್ 16.29 ಕೋಟಿ ರೂ. ಲಾಭ ಗಳಿಸಿದೆ. ಇದು ಈವರೆಗಿನ ದಾಖಲೆ ಪ್ರಮಾಣದ ಲಾಭವಾಗಿದೆ ಎಂದು ತಿಳಿಸಿದರು.
ಶೇ.93ರಷ್ಟು ಸಾಲ ವಸೂಲಿ
ಡಿಸಿಸಿ ಬ್ಯಾಂಕ್‍ನಲ್ಲಿ ಸಾಲ ವಸೂಲಾತಿ ಪ್ರಮಾಣ ಶೇ.93ರಷ್ಟಿದೆ. ಕರೋನ ಕಾಲದಲ್ಲಿಯೂ ಕೃಷಿ ಸಾಲ ವಸೂಲಿ ಪ್ರಮಾಣ ಚೆನ್ನಾಗಿದೆ. ಮುಂದಿನ ವರ್ಷದಲ್ಲಿ ಹೆಚ್ಚು ಸಾಲ ವಿತರಣೆ ಮತ್ತು 20 ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆ ಇದೆ ಎಂದು ಚನ್ನವೀರಪ್ಪ ತಿಳಿಸಿದರು.
ಎಟಿಎಂ, ಡಿಜಿಟಲ್ ಬ್ಯಾಂಕಿಂಗ್
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಪ್ರತಿ ತಾಲೂಕಿನಲ್ಲೂ ಎಟಿಎಂ ಆರಂಭಿಸಲು ಯೋಜಿಸಲಾಗಿದೆ. ಹಾಗೆಯೇ ಡಿಜಿಟಲ್ ಬ್ಯಾಂಕಿಂಗ್‍ಗೂ ವ್ಯವಸ್ಥೆ ಮಾಡಲಾಗುತ್ತಿದೆ. ಮತ್ತೊಂದೆಡೆ ಐದು ಹೊಸ ಶಾಖೆಗಳನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದರು.
ವಿಡಿಯೋ ವರದಿ
ಬ್ಯಾಂಕ್‍ನ ನಿರ್ದೇಶಕರಾದ ಎಸ್.ಪಿ.ದಿನೇಶ್, ಹೆಚ್.ಎಲ್.ಷಡಾಕ್ಷರಿ, ಬಿ.ಡಿ.ಭೂಕಾಂತ, ವ್ಯವಸ್ಥಾಪಕ ನಿರ್ದೇಶಕರಾದ ರಾಜಣ್ಣ ರೆಡ್ಡಿ ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















