ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಬಿಗಿ ಭದ್ರತೆಯಲ್ಲಿ ಶಿವಮೊಗ್ಗ – ಭದ್ರಾವತಿ ನಡುವೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬಂದೋಬಸ್ತ್‌ನಲ್ಲಿ ಬಸ್ಸುಗಳನ್ನು ಬಿಡಲಾಗುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಇವತ್ತು ರಸ್ತೆಗಿಳಿಯಲಿಲ್ಲ ಕೆಎಸ್‌ಆರ್‌ಟಿಸಿ ಬಸ್ಸುಗಳು
ನೌಕರರ ಮುಷ್ಕರಿಂದಾಗಿ ಕೆಎಸ್‍ಆರ್‌ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಮುಷ್ಕರದ ಮೊದಲ ದಿನ ಶಿವಮೊಗ್ಗ – ಭದ್ರಾವತಿ ನಡುವೆ ಬಸ್ಸುಗಳು ಸಂಚರಿಸುತ್ತಿದ್ದವು. ಆದರೆ ಮಾಚೇನಹಳ್ಳಿ ಬಳಿ ದುಷ್ಕರ್ಮಿಗಳು ಬಸ್ಸಿಗೆ ಕಲ್ಲು ತೂರಿದ್ದರು. ಹಾಗಾಗಿ ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರವು ಸ್ಥಗಿತವಾಗಿತ್ತು. ಇವತ್ತು ಕೆಎಸ್‌ಆರ್‌ಟಿಸಿ ಭದ್ರತಾ ಸಿಬ್ಬಂದಿಯ ಭದ್ರತೆಯಲ್ಲಿ ಬಸ್ಸುಗಳ ಸಂಚಾರ ಪುನಾರಂಭವಾಗಿದೆ. ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಸಂಚರಿಸುತ್ತಿದ್ದಾರೆ.
ಇದನ್ನೂ ಓದಿ | ಮಾಚೇನಹಳ್ಳಿ ಬಳಿ KSRTC ಬಸ್‌ಗೆ ಕಲ್ಲು ತೂರಿದ ದುಷ್ಕರ್ಮಿಗಳು
ಇವತ್ತು ರಸ್ತೆಗಿಳಿಯದ ಸಾರಿಗೆ ಬಸ್
ನೌಕರರ ಮುಷ್ಕರದಿಂದಾಗಿ ಇವತ್ತು ಕೂಡ ಕೆಎಸ್‍ಆರ್‍ಟಿಸಿ ಬಸ್ಸುಗಳು ರಸ್ತೆಗಿಳಿಯುವುದಿಲ್ಲ. ಶಿವಮೊಗ್ಗ ಬಸ್ ನಿಲ್ದಾಣ ಇವತ್ತೂ ಖಾಲಿ ಖಾಲಿಯಾಗಿದೆ. ಬಸ್ಸುಗಳು ಸಂಚರಿಸುವುದಿಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರು ಕೂಡ ನಿಲ್ದಾಣಕ್ಕೆ ಬರುತ್ತಿಲ್ಲ.
ಇದನ್ನೂ ಓದಿ | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

- ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

- ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

About The Editor
ನಿತಿನ್ ಆರ್.ಕೈದೊಟ್ಲು
















