ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಗೆ ಬೆಂಕಿ ತಗುಲಿದ್ದು, ಮೇಲ್ಭಾಗ ಸಂಪೂರ್ಣ ಸುಟ್ಟು ಹೋಗಿದೆ.
ಗುರುಪುರದ ಅಮ್ಮಾಜಿ ಅಪಾರ್ಟ್ಮೆಂಟ್ ಸಮೀಪ ರಸ್ತೆಯಲ್ಲಿ ಬಸ್ ನಿಲ್ಲಿಸಲಾಗಿತ್ತು. ಇವತ್ತು ಮಧ್ಯಾಹ್ನ ಬಸ್ಗೆ ಬೆಂಕಿ ತಗುಲಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ವಿಚಾರ ತಿಳಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ | ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ, ಸುಟ್ಟು ಕರಕಲಾಯ್ತು ವಾಹನ
ಧಗಧಗ ಹೊತ್ತಿ ಉರಿದ ಬಸ್
ಬೆಂಕಿಯಿಂದಾಗಿ ಬಸ್ನ ಮೇಲ್ಭಾಗ ಸುಟ್ಟು ಕರಕಲಾಗಿದೆ. ಸೀಟುಗಳು, ಕಿಟಕಿ, ಗ್ಲಾಸ್ಗಳು ಸೇರಿದಂತೆ ಬಹುಭಾಗ ಸುಟ್ಟು ಹೋಗಿದೆ.
ಲಾಕ್ಡೌನ್ ಹಿನ್ನೆಲೆ ನಿಂತ ಬಸ್
ಶಿವಮೊಗ್ಗ – ಚಿತ್ರದುರ್ಗ ನಡುವೆ ಬಸ್ ಸಂಚರಿಸುತ್ತಿತ್ತು. ಕರೋನ ಲಾಕ್ಡೌನ್ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹಾಗಾಗಿ ಮಾಲೀಕ ರವಿಕುಮಾರ್ ಅವರು ತಮ್ಮ ಮನೆಯ ಸಮೀಪ ರಸ್ತೆಯಲ್ಲಿ ಬಸ್ ನಿಲ್ಲಿಸಿಕೊಂಡಿದ್ದರು.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಬೆಂಕಿ ಹಿಂದೆ ಅನುಮಾನ
ಬಸ್ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಅದರಲ್ಲಿದ್ದ ಬ್ಯಾಟರಿಯನ್ನು ತೆಗೆದಿಡಲಾಗಿತ್ತು. ಡಿಸೇಲ್ ಕೂಡ ಕಡಿಮೆ ಇತ್ತು. ಹಾಗಾಗಿ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹೊತ್ತಿಕೊಳ್ಳುವ ಸಂಭವ ಕಡಿಮೆ. ಕಿಡಿಗೇಡಿಗಳು ಕೃತ್ಯದ ಬಗ್ಗೆ ಶಂಕೆ ಇದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















