ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020
ದಾಖಲೆ ರಹಿತ ಜನವಸತಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಎಲ್ಲಾ ಸರ್ಕಾರಗಳು ಮತ್ತು ಅಧಿಕಾರಿ ವರ್ಗ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿವೆ. ಕೂಡಲೆ ಈ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಅಶೋಕ್ ನಾಯ್ಕ್, ದಾಖಲೆ ರಹಿತ ಜನವಸತಿಗಳಿಗೆ ಕಾನೂನಿನ ಮಾನ್ಯತೆ ನೀಡಬೇಕು. ಮನೆಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಕಾರ ರಾಜ್ಯದಲ್ಲಿ 59,753 ಜನವಸತಿ ಪ್ರದೇಶಗಳಿವೆ. ಕಂದಾಯ ಗ್ರಾಮಗಳ ಸಂಖ್ಯೆ 32,373. ಸರ್ಕಾರಿ ದಾಖಲೆಗೆ ಬಾರದ 27,980 ಜನವಸತಿ ಪ್ರದೇಶಗಳಿಗೆ. ಶಿವಮೊಗ್ಗ ಜಿಲ್ಲೆಯಲ್ಲಿ 1,436 ಸರ್ಕಾರಿ ದಾಖಲೆ ಇಲ್ಲದ ಜನವಸತಿ ಪ್ರದೇಶವಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 74ಕ್ಕೂ ಹೆಚ್ಚು ಪ್ರದೇಶ ಸರ್ಕಾರಿ ದಾಖಲೆ ಇಲ್ಲದ ಜನ ವಸತಿ ಪ್ರದೇಶವಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಂಜುನಾಥ್, ನಾಗರಾಜ್, ಗೋಪಾಲ್, ಗಿರೀಶ್, ವೀರಭದ್ರಪ್ಪ ಪೂಜಾರ್, ಸೌಮ್ಯ ಭೋಜನಾಯ್ಕ್, ರತ್ನಾಕರ್ ಶೆಣೈ ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]