ಮೆಗ್ಗಾನ್‌ಗೆ ಗೈರು, ಖಾಸಗಿಯಲ್ಲಿ ಹಾಜರು, ವಾಟ್ಸಪ್‌ನಲ್ಲೇ ಚಿಕಿತ್ಸೆ ಕೊಡ್ತಾರಂತೆ ಈ ವೈದ್ಯರು, ಕ್ರಮಕ್ಕೆ ರೆಡಿಯಾಯ್ತು ಜಿಲ್ಲಾಡಳಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020

ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಗ್ಗಾನ್ ಆಸ್ಪತ್ರೆ ವೈದ್ಯರಿಗೆ ಬಿಸಿ ಮುಟ್ಟಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇದಕ್ಕಾಗಿ ತಂಡ ರಚಿಸಲಾಗಿದ್ದು, ವರದಿ ನೀಡುವಂತೆ ಸೂಚಿಸಲಾಗಿದೆ.

ಏನಿದು ತಂಡ? ವರದಿ ಯಾಕೆ?

ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅವರಿಗೆ ಈ ಬಗ್ಗೆ ಸಾರ್ವಜನಿಕರೇ ನೇರವಾಗಿ ದೂರು ಸಲ್ಲಿಸಿದ್ದಾರೆ.

ವಾಟ್ಸಪ್‍ನಲ್ಲಿ ಚಿಕಿತ್ಸೆ ಕೊಡ್ತಾರಂತೆ..!

ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ, ಮೆಗ್ಗಾನ್ ಆಸ್ಪತ್ರೆಗೆ ಬಂದ ರೋಗಿಗಳಿಗೆ ವಾಟ್ಸಪ್ ಮೂಲಕ ಚಿಕಿತ್ಸೆ ಕೊಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೆ ಇದನ್ನು ದೃಢಪಡಿಸಿದ್ದಾರೆ.

ರೌಂಡ್ಸ್ ಬರಲ್ಲ, ಚೆಕಪ್ ಮಾಡಲ್ಲ

ಸಾಮಾನ್ಯವಾಗಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ತವ್ಯ ನಿರ್ವಹಿಸಬೇಕು. ಮಧ್ಯಾಹ್ನ ಸುಮಾರು ಒಂದು ಗಂಟೆಯ ವಿರಾಮದ ಅವಧಿ ಇರಲಿದೆ. ಆದರೆ ಹಲವು ವೈದ್ಯರು ಈ ಅವಧಿಯಲ್ಲೂ ಆಸ್ಪತ್ರೆಯಲ್ಲಿ ಇರಲ್ಲ. ಸರಿಯಾಗಿ ರೌಂಡ್ಸ್ ಬರಲ್ಲ, ಬಂದರೂ ಚೆಕಪ್ ನೀಟಾಗಿ ಮಾಡಲ್ಲ ಅನ್ನುವ ದೂರುಗಳಿವೆ.

ಆಸ್ಪತ್ರೆಯಲ್ಲಿ ಮೂಕರ್ಜಿ ಕಾಟ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂಕರ್ಜಿ ಕಾಟ ಶುರುವಾಗಿದೆ. ಸಿಬ್ಬಂದಿಗಳೇ ವೈದ್ಯರ ವಿರುದ್ಧ ಮೂಕರ್ಜಿಗಳನ್ನು ಬರೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೂ ಇತ್ತೀಚೆಗೆ ಮೂಕರ್ಜಿಗಳು ತಲುಪಿವೆ. ಕರ್ತವ್ಯ ಸರಿಯಾಗಿ ನಿಭಾಯಿಸದ ವೈದ್ಯರಿಗೂ ಈ ಮೂಕರ್ಜಿಗಳು ಬಿಸಿ ಮುಟ್ಟಿಸುತ್ತಿವೆ. ಈ ಮಧ್ಯೆ ವೃತ್ತಿ ವೈಷಮ್ಯದಿಂದಲೂ ಕೆಲವರು ಸರಿಯಾಗಿ ಕರ್ತವ್ಯ ನಿರ್ವಹಿಸುವ ವೈದ್ಯರ ವಿರುದ್ಧ ಮೂಕರ್ಜಿಗಳನ್ನು ಬರೆದಿದ್ದಿದೆ.

ಹೊರಗೆ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುವುದು, ಖಾಸಗಿ ಅಸ್ಪತ್ರೆಗಳಿಗೆ ರೋಗಿಗಳನ್ನು ರೆಫರ್ ಮಾಡುತ್ತಿರುವ ಪ್ರಕರಣಗಳು ವರದಿಯಾಗಿವೆ. ಮೆಗ್ಗಾನ್ ಆಸ್ಪತ್ರೆ ಆಡಳಿತ ಮಂಡಳಿ ಜೊತೆಗೆ ಇತ್ತೀಚಗೆ ಸಚಿವ ಈಶ್ವರಪ್ಪ ನಡೆಸಿದ ಸಭೆಯಲ್ಲಿ ಇವೆಲ್ಲವು ಚರ್ಚೆಯಾಗಿವೆ. ಈ ನಡುವೆ ಇಂತಹ ವೈದ್ಯರಿಗೆ ಚುರುಕು ಮುಟ್ಟಿಸುವ ಸಲುವಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಒಂದು ಸ್ಕ್ವಾಡ್ ರಚಿಸಲಾಗಿದೆ.

133181257 1297055363989214 9021580824310194855 n.jpg? nc cat=102&ccb=2& nc sid=8bfeb9& nc ohc=pJP7SxCCr0cAX8wA021& nc ht=scontent.fblr11 1

ಏನಿದು ಸ್ಕ್ವಾಡ್? ಕೆಲಸವೇನು?

ಬೇರೆಡೆ ಕರ್ತವ್ಯ ನಿರ್ವಹಿಸವ ಮೆಗ್ಗಾನ್ ಆಸ್ಪತ್ರೆ ವೈದ್ಯರು ಯಾರು, ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಾರೆ ಅನ್ನುವುದರ ಪರಿಶೀಲನೆ ನಡೆಸಿ, ಈ ಸ್ಕ್ವಾಡ್‍ ವರದಿ ಸಿದ್ಧಪಡಿಸಲಿದೆ. ಮೆಗ್ಗಾನ್ ಆಡಳಿತ ಮಂಡಳಿಗೆ ವರದಿ ನೀಡಲಾಗುತ್ತದೆ. ಇಂತಹ ವೈದ್ಯರಿಗೆ ನೊಟೀಸ್‍ ನೀಡಿ, ಕಾನೂನು ಕ್ರಮ ಕೈಗೊಳ್ಳುವ ಕುರಿತು ಆಲೋಚಿಸಲಾಗಿದೆ.

ಸುತ್ತಮುತ್ತಲ ಊರುಗಳಿಗೆ ಮೆಗ್ಗಾನ್ ಆಸ್ಪತ್ರೆಯೇ ದೊಡ್ಡಾಸ್ಪತ್ರೆ. ಜಿಲ್ಲೆಯ ರೋಗಿಗಳು ಮಾತ್ರವಲ್ಲ, ಪಕ್ಕದ ಜಿಲ್ಲೆಗಳ ಹೊನ್ನಾಳಿ, ಚನ್ನಗಿರಿ, ತರೀಕೆರೆ, ಕಡೂರು ತಾಲೂಕುಗಳು,  ಹಾವೇರಿ ಜಿಲ್ಲೆಯಿಂದಲೂ ಇಲ್ಲಿಗೆ ಚಿಕಿತ್ಸೆಗೆ ಬರುತ್ತಾರೆ. ಇಂತಹ ಸಂದರ್ಭ ಸರಿಯಾದ ಚಿಕಿತ್ಸೆ ನೀಡಬೇಕಿರುವುದು ಅಗತ್ಯ. ಹಾಗಾಗಿ ಮೆಗ್ಗಾನ ಆಸ್ಪತ್ರೆಗೆ ಮೇಜರ್ ಸರ್ಜರಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment