ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SAGARA NEWS | 28 DECEMBER 2020
ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೇ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದ ಬಳಿಕ ಜಂಟಿ ಸರ್ವೇಯ ನಿರ್ಧಾರ ಪ್ರಕಟಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಾಸಕ ಹಾಲಪ್ಪ ಅವರೊಂದಿಗೆ ಸಾಗರ ಪಟ್ಟಣದ ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಪರಿಶೀಲನೆ ನಡೆಸಿದರು. ಅಲ್ಲದೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಏನಂದರು ಡಿಸಿ?
ಪರಿಶೀಲನೆ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೆ ನಡೆಸಲಾಗುತ್ತದೆ. ನಗರಸಭೆ ವತಿಯಿಂದ ಈಗಾಗಲೇ ಒಂದು ಸುತ್ತಿ ಸರ್ವೆ ಕಾರ್ಯ ಮಾಡಲಾಗಿದೆ. ನಮ್ಮಲ್ಲಿರುವ ದಾಖಲೆಗಳ ಪರಿಶೀಲನೆ ನಡೆಸಿ ಜನವರಿ 30ರ ಬಳಿಕ ಸರ್ವೆ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಮನೆ ಅಥವಾ ವಾಣಿಜ್ಯ ಮಳಿಗೆಗಳು ಯಾವುದೇ ಆಗಿದ್ದರೂ ಸರ್ಕಾರಿ ಜಾಗದಲ್ಲಿದ್ದರೆ ತೆರವುಗೊಳಿಸಲಾಗುತ್ತದೆ ಎಂದರು.
30 ಕೋಟಿ ರೂ. ಮಂಜೂರಾಗಲಿದೆ
ಇದೇ ವೇಳೆ ಸಾಗರ ಶಾಸಕ ಹರತಾಳು ಹಾಲ್ಪಪ್ಪ ಮಾತನಾಡಿ, ಸೊರಬ ರಸ್ತೆ ಅಗಲೀಕರಣಕ್ಕೆ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿದೆ. ಸ್ಥಳೀಯರೊಂದಿಗೆ ಈಗಾಗಲೇ ಒಂದು ಹಂತದ ಚರ್ಚೆ ನಡೆಸಲಾಗಿದೆ ಎಂದರು.
ಇದೇ ವೇಳೆ, ಗಣಪತಿ ಕೆರೆ ಪಕ್ಕದ ಕೊಪ್ಪಲಗದ್ದೆಯಲ್ಲಿ 25.35 ಎಕರೆ ಭು ಸ್ವಾಧೀನದ ಕುರಿತು ಪರಿಶೀಲನೆ ನಡೆಸಲಾಯಿತು. ಭೂ ಸ್ವಾಧೀನಕ್ಕೆ 5 ಕೋಟಿ ರೂ. ಸರ್ಕಾರ ಮಂಜೂರು ಮಾಡಿದೆ. 1 ಕೋಟಿ ರೂ. ಹಣ ಖಾತೆಯಲ್ಲಿದೆ. ಇಲ್ಲಿ ಅಥ್ಲೆಟಿಕ್ಸ್ಗಾಗಿ ಸಿಂಥಟಿಕ್ ಟ್ರ್ಯಾಕ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ಇನ್ನು, ಗಣಪತಿ ಕೆರೆ ಪಕ್ಕದಲ್ಲಿ ನಿರ್ಮಿಸಲಾಗಿರುವ ಬೃಹತ್ ಧ್ವಜಸ್ಥಂಭ ಕಾಮಗಾರಿ ಪರಿಶೀಲನೆ ನಡೆಸಲಾಯಿತು. ಜನವರಿ 23 ಅಥವಾ 24ರಂದು ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಉದ್ಘಾಟಿಸಲು ಯೋಜಿಸಲಾಗಿದೆ.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ಮಹೇಶ್, ಸದಸ್ಯರಾದ ಗಣೇಶ್ ಪ್ರಸಾದ್, ಲಿಂಗರಾಜ್, ಅರವಿಂದ ರಾಯ್ಕರ್, ಕುಸುಮಾ ಸುಬ್ಬಣ್ಣ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]