ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪ ಸಭಾಪತಿ ಧರ್ಮೇಗೌಡ ಅವರ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಧರ್ಮೇಗೌಡರಿಗೆ ಗೌರವ ಸಲ್ಲಿಸಲಾಯಿತು.
ಇದನ್ನೂ ಓದಿ | ನವೆಂಬರ್ 29 – ಶಿವಮೊಗ್ಗದಲ್ಲಿದ್ದರು ಧರ್ಮೇಗೌಡ, ಡಿಸೆಂಬರ್ 29 – ಶಿವಮೊಗ್ಗದಲ್ಲಿದ್ದಾರೆ ಧರ್ಮೇಗೌಡ
ರಾಷ್ಟ್ರಧ್ವಜ ಹೊದಿಸಿ ಗೌರವ
ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಧರ್ಮೇಗೌಡ ಅವರ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಶವಾಗಾರದ ಬಳಿ ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಪಾರ್ಥೀವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ನಮನ ಸಲ್ಲಿಸಲಾಯಿತು.
ಇದನ್ನೂ ಓದಿ | ಅವತ್ತು ಸಹ್ಯಾದ್ರಿ ಕಾಲೇಜಿನಲ್ಲಿ ಅವರ ಪಕ್ಕ ಕುಳಿತಿದ್ದೆ, ಆಶೀರ್ವಾದವು ಸಿಕ್ಕಿತ್ತು, ಹೀಗಾಗಬಾರದಿತ್ತು
ಸಚಿವರು, ಸಂಸದರಿಂದ ನಮನ
ಧರ್ಮೇಗೌಡ ಅವರ ಪಾರ್ಥೀವ ಶರೀರಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಪುಷ್ಪನಮನ ಸಲ್ಲಿಸಿದರು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಹುಟ್ಟೂರಿಗೆ ಪಾರ್ಥೀವ ಶರೀರ
ಆಂಬುಲೆನ್ಸ್ ಮೂಲಕ ಧರ್ಮೇಗೌಡ ಅವರ ಹುಟ್ಟೂರಿಗೆ ಪಾರ್ಥೀವ ಶರೀರ ರವಾನಿಸಲಾಗಿದೆ. ಆಂಬುಲೆನ್ಸ್ ಸಾಗುವ ಮಾರ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]