ಶಿವಮೊಗ್ಗ ಲೈವ್.ಕಾಂ | 3 ಜನವರಿ 2019
ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ, ಕುಟುಂಬದವರ ಜೊತೆಗೆ ಹೊಸ ವರ್ಷಾಚರಣೆಗೆ ವಿದೇಶಕ್ಕೆ ತೆರಳಿದ್ದಾರೆ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]() |

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ 150 ತಾಲೂಕುಗಳಲ್ಲಿ ಬರವಿದೆ. ಬರಪೀಡಿತ ಪ್ರದೇಶಗಳಲ್ಲಿ ಬಿಜೆಪಿ ತಂಡ ತೆರಳಿ ವಸ್ತುಸ್ಥಿತಿ ಅಧ್ಯಯನ ಮಾಡಿದೆ. ಈ ತಾಲೂಕಿನ ಜನರ ಬವಣೆ ಕುರಿತು ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಲು ಶುರು ಮಾಡಿದ ನಂತರ ರಾಜ್ಯ ಸರ್ಕಾರ ಪ್ರತೀ ತಾಲೂಕಿಗೆ 50 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದರು.

ಸಾಲಮನ್ನಾ, ಸರ್ಕಾರ ಸಂಪೂರ್ಣ ವಿಫಲ
ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಯಡಿಯೂರಪ್ಪ, ರೈತರ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನವನ್ನೇ ನಡೆಸುತ್ತಿಲ್ಲ ಎಂದು ಆಪಾದಿಸಿದರು. ಸಾಲಮನ್ನಾ ಕುರಿತಾಗಿ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕ್’ಗಳಿನ ರೈತರ ಸಾಲ ಮನ್ನಾ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200