ದೇಗುಲದ ಗೇಟ್ ಬೀಗ ಮುರಿದು ಕಳ್ಳತನ, ಮನೆ ಬಾಗಿಲು ಬೀಗ ಒಡೆದು ಚಿನ್ನ, ನಗದು ದೋಚಿದ ಖದೀಮರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020

ಶಿವಮೊಗ್ಗದ ಮುತ್ತುಮಾರಿಯಮ್ಮ ದೇವಸ್ಥಾದನಲ್ಲಿ ಕಳ್ಳತನ ಮಾಡಲಾಗಿದೆ. ಗೇಟ್‍ನ ಬಾಗಿಲು ಮುರಿದು ಕೃತ್ಯ ಎಸಗಲಾಗಿದೆ.

ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿರುವ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ದೇವಸ್ಥಾನದ ಹುಂಡಿ ಹೊಡೆದು, ಹಣದ ದೋಚಲಾಗಿದೆ ಎಂದು ತಿಳಿಸಿದ್ದಾರೆ.

ಮನೆ ಬೀಗ ಮುರಿದ ಖದೀಮರು

ಮತ್ತೊಂದೆಡೆ ಬೊಮ್ಮನಕಟ್ಟೆಯ ಜಿ ಬ್ಲಾಕ್‍ನಲ್ಲಿರುವ ಮನೆಯೊಂದರ ಬೀಗ ಮುರಿದು ಚಿನ್ನ ಮತ್ತು ನಗದು ದೋಚಲಾಗಿದೆ. ಪ್ರಮೀಳಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಪ್ರಮೀಳಾ ಅವರು ತಮ್ಮ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. 10 ಗ್ರಾಂ ಚಿನ್ನ, 30 ಸಾವಿರ ನಗದು ಕಳ್ಳತನ ಮಾಡಲಾಗಿದೆ.

ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment