ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 03 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಕ್ಷೇತ್ರದ ಸದಸ್ಯರು ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳಲ್ಲಿ ಕರೋನ ಜಾಗೃತಿ ಮೂಡಿಸಿ, ಮಾದರಿಯಾಗಿದ್ದಾರೆ.
ಹೊಸೂರು ಕ್ಷೇತ್ರದ ನೂತನ ಸದಸ್ಯರಾದ ಶಶಾಂಕ್ ಹೆಗ್ಡೆ ಮತ್ತು ಶ್ವೇತಾ ಗಿರೀಶ್ ತಮ್ಮ ಕ್ಷೇತ್ರ ವ್ಯಾಪ್ತಿಯ ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮತ್ತು ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯೊಂದಿಗೆ ಚರ್ಚೆ ನಡೆಸಿದರು. ಅಲ್ಲದೆ ಕರೋನ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಇಲ್ಲಿ ಚುನಾವಣೆಗೆ ನಿಂತ ಅಭ್ಯರ್ಥಿಗಳು ದೇವಸ್ಥಾನದಲ್ಲಿ ಪ್ರಮಾಣ ಮಾಡಬೇಕು, ಏನಂತ ಗೊತ್ತಾ?
ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ. ಹಾಗಾಗಿ ಶಾಲಾಭಿವೃದ್ಧಿಗೆ ತಮ್ಮ ಪೂರ್ಣ ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದರು. ಅಲ್ಲದೆ ಕರೋನ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ತಾಲೂಕು ಎಪಿಎಂಸಿ ಸದಸ್ಯರಾದ ಹಸಿರುಮನೆ ಮಹಾಬಲೇಶ್, ಗಿರೀಶ್ ಕಲ್ಕೋಡು, ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುಬಾಬು ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]