ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಹೀಗೆ ಬರುವವರು ಕೋವಿಡ್ ಮಾರ್ಗಸೂಚಿ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಸೃಷ್ಟಿಸಿದೆ.
ಲಾಂಚ್‍ನಲ್ಲಿ ಜನವೋ ಜನ
ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬರುತ್ತಿದ್ದಾರೆ. ಶನಿವಾರ ಭಾರಿ ಸಂಖ್ಯೆಯ ಪ್ರವಾಸಿಗರು ಬಂದಿದ್ದರು. ಬಸ್ಸುಗಳ ಸಂಚಾರ ಸಂಪೂರ್ಣವಾಗಿ ಆರಂಭವಾಗಿಲ್ಲ. ಹಾಗಾಗಿ ಖಾಸಗಿ ವಾಹನಗಳಲ್ಲಿಯೆ ಜನರು ಬರುತ್ತಿದ್ದಾರೆ. ಜನರ ಸಂಖ್ಯೆ ಹೆಚ್ಚಿರುವುದರಿಂದ ಲಾಂಚ್‍ನಲ್ಲಿ ವಾಹನಗಳನ್ನು ಹತ್ತಿಸುತ್ತಿಲ್ಲ.
ಕೋವಿಡ್ ನಿಯಮ ಗಾಳಿಗೆ
ಇಲ್ಲಿಗೆ ಬರುತ್ತಿರುವ ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಮತ್ತು ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಲಾಂಚ್‍ನಲ್ಲಿ ಜನದಟ್ಟಣೆ ಹೆಚ್ಚುವುದರಿಂದ ಅಂತರ ಕಾಪಾಡಿಕೊಳ್ಳುವುದು ಅಸಾಧ್ಯವಾಗುತ್ತಿದೆ.
ಸ್ಥಳೀಯರಿಗೆ ಕಷ್ಟ ಕಷ್ಟ
ಲಾಂಚ್‍ನಲ್ಲಿ ಜನದಟ್ಟಣೆ ಹೆಚ್ಚಿರುವುದರಿಂದ ಸ್ಥಳೀಯರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಕೃಷಿ ಚುಟುವಟಿಕೆಗೆ ಟ್ರಾಕ್ಟರ್‍ಗಳು ಸೇರಿದಂತೆ ಯಾವುದೆ ವಾಹನಗಳು ಲಾಂಚ್ ಹತ್ತಿಸಲು ಆಗುತ್ತಿಲ್ಲ. ಇದರಿಂದ ರೈತರ ಕೆಲಸಗಳು ವಿಳಂಬವಾಗುತ್ತಿದೆ.
ಇನ್ನು, ಪ್ರವಾಸಿಗರು ಕೋವಿಡ್ ನಿಯಮ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಉಂಟು ಮಾಡುತ್ತಿದೆ. ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಗ್ರಾಮ ಪಂಚಾಯಿತಿ ಅಥವಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]