ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 05 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಕ್ಷಾಂತರ ಮೌಲ್ಯದ ಬೈಕ್ಗಳ ಕಳ್ಳತನ ಮಾಡಿದ್ದ ಖದೀಮರು ಪೊಲೀಸರ ಬಲೆಗೆ ಬಿದಿದ್ದಾರೆ. ಶಿರಾಳಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಶಿರಾಳಕೊಪ್ಪದ ದಾದಾಪೀರ್ ಅಲಿಯಾಸ್ ದಾದು (30) ಮತ್ತು ಜಮೀರ್ ಅಹಮದ್ ಅಲಿಯಾಸ್ ಶಾರೂಖ್ (27) ಬಂಧಿತರು.
ಯಾವೆಲ್ಲ ಕೇಸ್ ದಾಖಲಾಗಿದೆ?
ಶಿರಾಳಕೊಪ್ಪ ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾದ ನಾಲ್ಕು ಬೈಕ್ ಕಳವು ಕೇಸ್, ದೊಡ್ಡಪೇಟೆ ಠಾಣೆಯಲ್ಲಿ 2017ರಲ್ಲಿ ದಾಖಲಾದ ಒಂದು ಬೈಕ್ ಕಳ್ಳತನ ಕೇಸ್ ಸೇರಿ 3 ಲಕ್ಷ ರೂ. ಮೌಲ್ಯದ 7 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಶಿಕಾರಿಪುರ ಡಿವೈಎಸ್ಪಿ ವಿನಾಯಕ ಶೆಟಗೇರಿ ಮಾರ್ಗದರ್ಶನದಲ್ಲಿ ಸಿಪಿಐ ಗುರುರಾಜ್ ಮೈಲಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಪಿಎಸ್ಐ ರಮೇಶ್, ಸಿಬ್ಬಂದಿಗಳಾದ ಕೊಟ್ರೇಶ್, ಸಂಜೀವ್, ಮಧುಸೂದನ್, ಮಂಜುನಾಥ್, ಬಸವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]