ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜ್ಯೂಸ್ ಸೇವಿಸಿದ್ದ ಇಬ್ಬರು ಮಕ್ಕಳು ತೀವ್ರ ಅಸ್ವಸ್ಥರಾಗಿ, ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಜ್ಯೂಸ್‍ನಲ್ಲಿತ್ತಾ ವಿಷ?
ತಾಯಿಯೊಂದಿಗೆ ಗಾಂಧಿ ಪಾರ್ಕ್‍ಗೆ ಬಂದಿದ್ದ ಮಕ್ಕಳಿಬ್ಬರು, ಜ್ಯೂಸ್ ಕುಡಿದಿದ್ದಾರೆ. ಅಲ್ಲಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಮಕ್ಕಳ ಬಾಯಲ್ಲಿ ನೊರೆ ಬಂದಿದ್ದು, ಇಬ್ಬರು ಕುಸಿದು ಬಿದ್ದಿದ್ದಾರೆ. ಅಲ್ಲಿದ್ದ ಆಟೋ ಚಾಲಕರು, ಕೂಡಲೆ ಮಕ್ಕಳನ್ನು ಸಮೀಪದ ಮಕ್ಕಳ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸರ್ಜಿ ಮಕ್ಕಳ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ತಾಯಿಯ ವಿಚಾರಣೆ
ಅಶ್ವಿನ್ (8), ಆಕಾಂಕ್ಷಾ (4) ಮೃತ ಮಕ್ಕಳು. ಇವರು ಭದ್ರಾವತಿಯವರು. ತಾಯಿಯೊಂದಿಗೆ ಗಾಂಧಿ ಪಾರ್ಕ್‍ಗೆ ಬಂದಿದ್ದರು. ಘಟನೆ ಸಂಬಂಧ ಪೊಲೀಸರು ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]