ಶಿವಮೊಗ್ಗದಲ್ಲಿಲ್ಲ ಹಕ್ಕಿ ಜ್ವರ, ಪೌಲ್ಟ್ರಿಗಳಲ್ಲಿ ಇರಲಿ ಎಚ್ಚರ, ತುರ್ತು ದೂರವಾಣಿ ನಂಬರ್ ರಿಲೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021

ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿಜ್ವರ ಕುರಿತು ಕೈಗೊಳ್ಳಬೇಕಾಗಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ಏನೆಲ್ಲ ಚರ್ಚೆಯಾಯ್ತು? ಡಿಸಿ ಸೂಚನೆ ಏನು?

ನೆರೆ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ, ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರ ಲಕ್ಷಣದ ಬಗ್ಗೆ ನಿಗಾವಹಿಸಲು ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ.

ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ ಸಾರ್ವಜನಿಕರು ಕರೆ ಮಾಡಿ ಮಾಹಿತಿಯನ್ನು ನೀಡಬಹುದಾಗಿದೆ.

ಹಕ್ಕಿಗಳು ಸತ್ತಿರುವ ಬಗ್ಗೆ ವರದಿಯಾದರೆ ಈ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕು. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಗತ್ಯವಿದ್ದರೆ ಪರಿಶೀಲನೆಗೆ ಪ್ರಯೋಗಾಲಯಕ್ಕೆ ಕಳುಹಿಸಬೇಕು.

ಇದನ್ನೂ ಓದಿ | ಶಿವಮೊಗ್ಗದ ಪಾರ್ಕ್ನಲ್ಲಿ ಹಕ್ಕಿಗಳ ಸಾವು, ನಗರದಲ್ಲಿ ಹಕ್ಕಿ ಜ್ವರದ ಭೀತಿ, ಏನಂತಾರೆ ವೈದ್ಯರು? ವಿಡಿಯೋ ರಿಪೋರ್ಟ್

ಗಾಬರಿ ಬೇಡ, ಮಾಂಸ ಚೆನ್ನಾಗಿ ಬೇಯಿಸಿ

ಹಕ್ಕಿಜ್ವರದ ಬಗ್ಗೆ ಗಾಬರಿಯಾಗುವ ಅಗತ್ಯವಿಲ್ಲ. ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು. ಪೌಲ್ಟ್ರಿಯಲ್ಲಿ ಅಥವಾ ಹಕ್ಕಿಯೊಂದಿಗೆ ನೇರ ಸಂಪರ್ಕವಿರುವವರು ಹಕ್ಕಿಜ್ವರದಿಂದ ಬಾಧಿತರಾಗುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಆ ವ್ಯಕ್ತಿಗಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವ ಅಗತ್ಯ ಬರಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿ ಹಕ್ಕಿಜ್ವರದ ಬಗ್ಗೆ ನಿಗಾ ವಹಿಸಬೇಕು. ಕೋಳಿ ಫಾರ್ಮ್‍ಗಳಲ್ಲೂ ನಿಗಾ ವಹಿಸಬೇಕಾಗಿದ್ದು, ಫಾರ್ಮ್ ಮಾಲಿಕರೊಂದಿಗೆ ಸಭೆ ನಡೆಸಿ ಮಾಹಿತಿಯನ್ನು ನೀಡಬೇಕು. ಪಕ್ಷಿಗಳ ಹಿಕ್ಕೆ ಮತ್ತು ಕೆರೆಕುಂಟೆಗಳ ನೀರಿನ ಮಾದರಿಯನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಒದಗಿಸಬೇಕು. ವಲಸೆ ಹಕ್ಕಿಗಳ ಮೇಲೆ ನಿಗಾ ಇರಿಸಬೇಕು ಎಂದು ಹೇಳಿದರು.

ಸಂಪರ್ಕ ಸಂಖ್ಯೆ

ಹಕ್ಕಿಜ್ವರದ ಬಗ್ಗೆ ಯಾವುದೇ ಸಂಶಯಗಳು ಕಂಡು ಬಂದರೆ ಜಿಲ್ಲಾಮಟ್ಟದ ದೂರವಾಣಿ ಸಂಖ್ಯೆ 08182-255921, 226603 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪಶು ವೈದ್ಯಕೀಯ ಸೇವೆ ಉಪನಿರ್ದೇಶಕ ಸದಾಶಿವ ಅವರು ತಿಳಿಸಿದದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 8, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment