ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್) ಬಟಾಲಿಯನ್‍ಗೆ ಜನವರಿ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಜನವರಿ 16ರಂದು ಅಮಿತ್ ಷಾ ಅವರು ದೆಹಲಿಯಿಂದ ಬೆಂಗಳೂರಿಗೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ಆಗಮಿಸಲಿದ್ದಾರೆ. ಬುಳ್ಳಾಪುರದಲ್ಲಿ ಸ್ಥಾಪನೆ ಮಾಡಲಾಗುತ್ತಿರುವ ಆರ್‍ಎಎಫ್ ಘಟಕಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಸಿಎಂ, ಗೃಹ ಸಚಿವರು ಭಾಗಿ
ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚವ ಎಸ್.ಆರ್.ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಸ್ಥಳ ಪರಿಶೀಲನೆ
ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ಭದ್ರಾವತಿಯ ಬುಳ್ಳಾಪುರಕ್ಕೆ ತೆರಳಿ, ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು. ವೇದಿಕೆಯ ಸಿದ್ಧತೆ ಕುರಿತು ಆರ್‍ಎಎಫ್‍ನ ಅಧಿಕಾರಿಗಳು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರೊಂದಿಗೆ ಚರ್ಚೆ ನಡೆಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]