ರಾತ್ರಿ ಅಥವಾ ಬೆಳಗ್ಗೆ ಶಿವಮೊಗ್ಗಕ್ಕೆ ಬರುತ್ತೆ ಕರೋನ ಲಸಿಕೆ, ಸ್ಟೋರೇಜ್ ಎಲ್ಲಿ? ವಿತರಣಾ ವ್ಯವಸ್ಥೆ ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021

ಶಿವಮೊಗ್ಗ ಜಿಲ್ಲೆಗೆ ಕೋವಿಡ್ ಲಸಿಕೆ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ಲಸಿಕೆಯ ಸ್ಟೋರೇಜ್ ಮತ್ತು ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ.

ರಾತ್ರಿ ಅಥವಾ ಬೆಳಗ್ಗೆ ಬರುತ್ತೆ ಲಸಿಕೆ

ಬೆಂಗಳೂರಿಗೆ ಆಗಮಿಸಿರುವ ಲಸಿಕೆಯನ್ನು ಶಿವಮೊಗ್ಗದ ಸ್ಟೋರೇಜ್ ಸೆಂಟರ್‍ಗೆ ಕಳುಹಿಸಲಾಗುತ್ತಿದೆ. ಇವತ್ತು ರಾತ್ರಿ ಅಥವಾ ಬೆಳಗ್ಗೆ ಲಸಿಕೆ ತಲುಪುವ ಸಾದ್ಯತೆ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ ಸುರಗೀಹಳ್ಳಿ ತಿಳಿಸಿದ್ದಾರೆ.

ನಾಲ್ಕು ಕಡೆ ಸ್ಟೋರೇಜ್‍ಗೆ ವ್ಯವಸ್ಥೆ

ಶಿವಮೊಗ್ಗದ ನಾಲ್ಕು ಕಡೆಯಲ್ಲಿ ಕೋವಿಡ್ ಲಸಿಕೆ ಸ್ಟೋರಜ್‍ಗೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಈ ಹಿಂದೆ ವಿಡಿಯೋ ಸಹಿತ ವರದಿ ಪ್ರಕಟಿಸಿತ್ತು. ಅದರ ರಿಪೋರ್ಟ್ ಇಲ್ಲಿದೆ. ವಿಡಿಯೋ ಇಲ್ಲಿದೆ.

ಲಸಿಕೆ ವಿತರಣೆಗೆ ಸಿದ್ಥತೆ ಹೇಗಿದೆ?

ಕರೋನ ಲಸಿಕೆ ವಿತರಣೆ ಸಂಬಂಧ ಶಿವಮೊಗ್ಗ ಜಿಲ್ಲೆಯಾದ್ಯಂತ ಡ್ರೈ ರನ್ ಮಾಡಲಾಗಿದ್ದು, ಯಶಸ್ವಿಯಾಗಿದೆ.

ಜಿಲ್ಲೆಯಲ್ಲಿ 91 ಲಸಿಕೆ ವಿತರಣಾ ಕೇಂದ್ರಗಳನ್ನು ಗುರುತಿಸಿ, ಸಿದ್ಧಪಡಿಸಲಾಗಿದೆ.

ಒಟ್ಟು 22,004 ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತದೆ. ಈ ಪೈಕಿ ಅತಿ ಹೆಚ್ಚು ಮಂದಿ, ಅಂದರೆ, 13,200 ಮಂದಿ ಶಿವಮೊಗ್ಗ ತಾಲೂಕಿನಲ್ಲಿದ್ದಾರೆ.

ಶಿವಮೊಗ್ಗ ತಾಲೂಕಿನಲ್ಲಿ 45 ಲಸಿಕೆ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 13 ಸರ್ಕಾರಿ ಆಸ್ಪತ್ರೆಗಳು, ಪಿಹೆಚ್‍ಸಿಗಳಾಗಿದ್ದು, 22 ಖಾಸಗಿ ಸಂಸ್ಥೆಗಳು ಗುರುತಿಸಲಾಗಿದೆ.

ಪ್ರತಿ ಖಾಸಗಿ ಸಂಸ್ಥೆಗೆ ಲಸಿಕೆ ಜೊತೆಗೆ, ಸಿರೇಂಜನ್ನು ಸರ್ಕಾರದ ವತಿಯಂದಲೇ ಪೂರೈಕೆ ಮಾಡಲಾಗಿದೆ. ಅಲ್ಲದೆ ಸರ್ಕಾರದ ಒಬ್ಬ ಪ್ರತಿನಿಧಿ ಅಲ್ಲಿ ಉಪಸ್ಥಿತರಿರುತ್ತಾರೆ.

ಲಸಿಕಾ ಕೇಂದ್ರದಲ್ಲಿ ಐವರು ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ. ಒಬ್ಬರು ವ್ಯಾಕ್ಸಿನೇಕಟರ್ (ಲಸಿಕೆ ನೀಡುವವರು), ನಾಲ್ಕು ಮಂದಿ ಸೂಪರ್‍ವೈಸರ್‍ಗಳು ಇರುತ್ತಾರೆ.

ಲಸಿಕೆ ಪಡೆದವರು ಕಡ್ಡಾಯವಾಗಿ ಅರ್ಧ ಗಂಟೆ ಅಬ್ಸರ್‍ವೇಷನ್‍ನಲ್ಲಿ ಇರಬೇಕಾಗುತ್ತದೆ.

ಪ್ರತಿ ಲಸಿಕೆ ವಿತರಣಾ ಕೇಂದ್ರದಲ್ಲೂ ಆಂಬುಲೆನ್ಸ್ ಕಡ್ಡಾಯಗೊಳಿಸಲಾಗಿದೆ. ತುರ್ತು ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಅಥವಾ ತಾಲೂಕು ಆಸ್ಪತ್ರೆಗೆ ರವಾನಿಸಲು ಈ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಕೇಂದ್ರದಲ್ಲಿ ಒಂದು ದಿನಕ್ಕೆ ನೂರು ಫಲಾನುಭವಿಗಳಿಗೆ ಮಾತ್ರ ಅವಕಾಶ. ಒಂದು ವೇಳೆ ನಿಗದಿತ ದಿನದಂದು ಬರಲಾಗದಿದ್ದರೆ, ಮತ್ತೊಂದು ದಿನ ಸಮಯ ನಿಗದಿಪಡಿಸಿ, ಮೆಸೇಜ್ ಕಳುಹಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

137222609 1043894822757094 322437303418384090 o.jpg? nc cat=111&ccb=2& nc sid=730e14& nc ohc=FXf3xO1XGYIAX854qqz& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment