ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021
ಶಿವಮೊಗ್ಗ ಹಾಲು ಒಕ್ಕೂಟವು (ಶಿಮುಲ್) ಹಾಲು ಉತ್ಪಾದಕ ರೈತರಿಗೆ ಸಂಕ್ರಾಂತಿ ಕೊಡುಗೆಯಾಗಿ ಹಾಲಿನ ದರವನ್ನು 2.75 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯನ್ನು ಒಳಗೊಂಡ ಶಿಮುಲ್ನ ಮುಖ್ಯ ಕಚೇರಿಯಲ್ಲಿ ನಡೆದ ನಿರ್ದೆಶಕ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ದರ ಜ.13ರಿಂದ ಜಾರಿಗೆ ಬರಲಿದೆ.
ರೈತರಿಗೆ ಪ್ರಸ್ತುತ ಲೀಟರ್ಗೆ 22.50 ರೂ. ಸಿಗುತ್ತಿತ್ತು. ಜ.13ರಿಂದ ಲೀಟರ್ಗೆ 25.25 ರೂ. ಸಿಗಲಿದೆ. ಹಾಲಿನ ಗುಣಮಟ್ಟಕ್ಕೆ ಅನುಗುಣವಾಗಿ ಮತ್ತಷ್ಟು ಧಾರಣೆ ಸಿಗಲಿದೆ. ಸರಕಾರದ ಪ್ರೋತ್ಸಾಹ ಧನ ಲೀಟರ್ಗೆ 5 ರೂ. ಪ್ರತ್ಯೇಕ ಸಿಗಲಿದೆ.
ಫೆಬ್ರವರಿಯಲ್ಲಿ ಶಿಮುಲ್ನಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಲೀಟರ್ಗೆ 29 ರೂ. ಧಾರಣೆ ನೀಡಲಾಗುತ್ತಿತ್ತು. ಆದರೆ, ಕೋವಿಡ್-19 ಬಳಿಕ ಹಾಲಿನ ಮಾರಾಟ ತೀವ್ರ ಕುಸಿದು ಶೇ.50ಕ್ಕಿಂತ ಕಡಿಮೆಯಾಗಿತ್ತು.
ಪ್ರತಿದಿನ ಲಕ್ಷಾಂತರ ಲೀಟರ್ ಹಾಲು ಉಳಿದು ಒಕ್ಕೂಟವು ತೀವ್ರ ಆರ್ಥಿಕ ನಷ್ಟ ಅನುಭವಿಸಿದ್ದವು. ಕಳೆದ ನವೆಂಬರ್ನಿಂದ ಹಾಲಿನ ಮಾರಾಟ ಸುಧಾರಣೆ ಕಂಡಿದ್ದು ಆನಂತರದಲ್ಲಿ ಶಿಮುಲ್ ಆರ್ಥಿಕವಾಗಿ ಚೇತರಿಕೆ ಕಂಡಿದೆ.
ಹೀಗಾಗಿ ರೈತರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಹಾಲಿನ ದರವನ್ನು ಏರಿಕೆ ಮಾಡಿದೆ. ರೈತರ ಹಾಲಿನ ದರವನ್ನು ಹೆಚ್ಚಳ ಮಾಡಿದರೂ ಗ್ರಾಹಕರು ಖರೀದಿಸುವ ಹಾಲಿ ದರದಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ ಎಂದು ಶಿಮುಲ್ ಅಧ್ಯಕ್ಷ ಡಿ.ಆನಂದ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?