ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 JANUARY 2021
ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್) ಬಟಾಲಿಯನ್‍ನ ಶಂಕುಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದ ಸಿದ್ಧತೆ ಕುರಿತು ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು.
ಭದ್ರಾವತಿಯ ಆರ್‍ಎಎಫ್ ಬಟಾಲಿಯನ್‍ಗೆ ಭೇಟಿ ನೀಡಿದ್ದ ಸಂಸದ ಬಿ.ವೈ.ರಾಘವೇಂದ್ರ, ಕಾರ್ಯಕ್ರಮದ ಅಂತಿಮ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ವೇದಿಕೆ ಮುಂಭಾಗ ಒಂದಷ್ಟು ಮಾರ್ಪಾಡುಗಳನ್ನು ಸೂಚಿಸಿದರು.
ಎಷ್ಟೊತ್ತಿಗೆ ಬರ್ತಾರೆ ಅಮಿತ್ ಷಾ?
ಆರ್‌ಎಎಫ್‍ನ 97ನೇ ಬಟಾಲಿಯನ್ ಹೆಡ್‍ಕ್ವಾರ್ಟರ್ಸ್‍ಗೆ ಶಂಕುಸ್ಥಾಪನೆ ನೆರವೇರಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಅಮಿತ್ ಷಾ ಅವರು ಭದ್ರಾವತಿಗೆ ಆಗಮಿಸಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಿಎಂ ಪ್ರವಾಸದ ಪಟ್ಟ ರೆಡಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.40ಕ್ಕೆ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಬಿಎಸ್‍ಎಫ್ ಹೆಲಿಕಾಪ್ಟರ್‍ನಲ್ಲಿ ಭದ್ರಾವತಿಯತ್ತ ಪ್ರಯಾಣ ಬೆಳೆಸಲಿದ್ದಾರೆ. 12.30ಕ್ಕೆ ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿರುವ ವಿಐಎಸ್‍ಎಲ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಆರ್‍ಎಎಫ್ ಬಟಾಲಿಯನ್ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಬಿಎಸ್‍ಎಫ್ ಹೆಲಿಕಾಪ್ಟರ್ ಮೂಲಕ ಸಿಎಂ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.



ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com0
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















