ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 15 JANUARY 2021
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅಮಿತ್ ಷಾ, ಭದ್ರಾವತಿಯಲ್ಲಿ ಆರ್‍ಎಎಫ್ ಬೆಟಾಲಿಯನ್ ಸ್ಥಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ.
ಇಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಘಟಕ ನಿರ್ಮಾಣವಾಗಲಿದ್ದು, ರಾಜ್ಯ ಸರಕಾರ 50 ಎಕರೆ ಜಮೀನು ನೀಡಿದೆ. ಇಲ್ಲಿ ಸುಸಜ್ಜಿತವಾದ ವಸತಿಗೃಹಗಳು, ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ, ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದರ ಪ್ರಯೋಜನ ಸ್ಥಳೀಯರಿಗೂ ದೊರೆಯುವಂತೆ ಮಾಡಲಾಗುವುದು. ಸ್ಥಳೀಯರು ಇಲ್ಲಿನ ಎಲ್ಲಾ ಸೌಲಭ್ಯಗಳ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಇದೊಂದು ಐತಿಹಾಸಿಕ ದಿನ. ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ 97 ಎಕರೆ ಪ್ರದೇಶದಲ್ಲಿ ಆರ್‍ಎಎಫ್ ಘಟಕಕ್ಕೆ ರಾಜ್ಯ ಸರ್ಕಾರ 50 ಎಕರೆ ಪ್ರದೇಶ ನೀಡಿದೆ.
ಸಾರಿಗೆ ಸಂಪರ್ಕ ಉತ್ತಮವಾಗಿರುವ ಭದ್ರಾವತಿಯಲ್ಲಿ ಆರ್‍ಎಎಫ್ ಘಟಕ ಸ್ಥಾಪನೆಯಿಂದ ತುರ್ತು ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪಡೆಗಳನ್ನು ತರಿಸುವುದು ತಪ್ಪಲಿದೆ. ಇಲ್ಲಿ ಆರಂಭವಾಗಲಿರುವ ಘಟಕ ರಾಜ್ಯದ ಎಲ್ಲಾ ಜಿಲ್ಲೆಗಳು, ಕೇರಳದ ನಾಲ್ಕು, ಗೋವಾದ 2, ಪುದುಚೇರಿ ಮತ್ತು ಲಕ್ಷದ್ವೀಪದ ತಲಾ ಒಂದು ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿದೆ. ತುರ್ತು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರ್ಯದಲ್ಲಿ ಆರ್‍ಎಎಫ್ ಕೈಜೋಡಿಸಲಿದೆ ಎಂದು ಹೇಳಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಶ್ವಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಸಂಗಮೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
VIDEO / PHOTOS








ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






