ಮತ್ತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರಕ್ಕೆ ಸಚಿವ ಈಶ್ವರಪ್ಪ ತಿರುಗೇಟು, ಗಡಿ ಉಸ್ತುವಾರಿ ಸಚಿವರ ನೇಮಕದ ಕುರಿತು ಚರ್ಚೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021

ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಗಡಿ ಕ್ಯಾತೆ ತೆಗೆದಿರುವ ಬೆನ್ನಿಗೆ, ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಅಲ್ಲದೆ ಗಡಿ ಉಸ್ತುವಾರಿ ಸಚಿವರ ನೇಮಕದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆಸುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಪ್ರಾಂತ್ಯಗಳನ್ನು  ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ. ಹಾಗನ್ನುವುದಾದರೆ ಕನ್ನಡ ಭಾಷಿಕರು ಮಹಾರಾಷ್ಟ್ರದಾದ್ಯಂತ ಇದ್ದಾರೆ. ಮಹಾರಾಷ್ಟ್ರವನ್ನು ಕರ್ನಾಟಕಕ್ಕೆ  ಸೇರಿಸಿ ಎಂದು ಹೇಳಲು ಆಗುತ್ತದೆಯೆ ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರ, ಕೇರಳ, ಆಂಧ್ರದ ಜೊತೆ ಕರ್ನಾಟಕ ಗಡಿ ಹಂಚಿಕೊಂಡಿದೆ. ಎಲ್ಲರೊಂದಿಗೂ ಸೌಹಾರ್ದಯುತ ವಾತಾವರಣವಿದೆ. ಆದರೆ ಮಹಾರಾಷ್ಟ್ರದಲ್ಲಿ ಕೆಲವರು ಭೂಮಿ, ನೀರಿನ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಹಾಗೆ ಮಾಡಿದರೆ ಅವರ ಪಕ್ಷಕ್ಕೆ, ಅವರಿಗೆ ಹೆಚ್ಚು ಮತ ಸಿಗಲಿದೆ ಎಂಬ ನಂಬಿಕೆಯಲ್ಲಿದ್ದಾರೆ. ಹಾಗೆ ಹೇಳಿದಾಕ್ಷಣ ಅವರಿಗೆ ಭೂಮಿಕೊಡಲು ಸಾಧ್ಯವಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ಮತ್ತೊಂದೆಡೆ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.

VIDEO REPORT

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment