ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JANUARY 2021
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಮಂಡ್ಲಿಯ ಮನೆಯಲ್ಲಿ ಘಟನೆ ಸಂಭವಿಸಿದೆ.
ಸವಿತಾ (31) ನೇಣು ಬಿಗಿದುಕೊಂಡ ಗೃಹಿಣಿ. ಗಂಡ ಹೇಮಂತ್, ಆತನ ತಾಯಿ ಮತ್ತು ಮೈದುನನ ಕಿರುಕುಳದಿಂದಾಗಿ ಸವಿತಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ.
ಹೇಗಾಯ್ತು ಘಟನೆ?
ಸವಿತಾ ಮತ್ತು ಹೇಮಂತ್ ಮದುವೆಯಾಗಿ ಹತ್ತು ವರ್ಷವಾಗಿತ್ತು. ಕೆಲವು ವರ್ಷ ಸವಿತಾಳನ್ನು ಚೆನ್ನಾಗಿ ನೋಡಿಕೊಂಡಿದ್ದ ಹೇಮಂತ್, ಬಳಿಕ ವರದಕ್ಷಿಣೆಗಾಗಿ ಕಿರುಕುಳ ಆರಂಭಿಸಿದ್ದ. ಹೇಮಂತನ ತಾಯಿ ಮತ್ತು ಮೈದುನ ಕೂಡ ಕಿರುಕುಳ ನೀಡುತ್ತಿದ್ದರು.
ಬುಧವಾರ ಮಧ್ಯಾಹ್ನ ಗಂಡನ ಮನೆಯ ಕೊಠಡಿಯಲ್ಲಿ ಸವಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸವಿತಾಳ ಗಂಡ ಹೇಮಂತ್ , ಆತನ ತಾಯಿ ಮತ್ತು ಮೈದುನನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















