ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಸ್ಫೋಟಿಸಿದೆ. ಹಲವರು ಸಾವನ್ನಪ್ಪಿದ್ದು, ಘಟನೆ ಸಂಭವಿಸಿದ ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಲಾರಿಯಲ್ಲಿತ್ತು ಸ್ಫೋಟಕ
ಹುಣಸೋಡಿನ ಕಲ್ಲು ಕ್ವಾರಿಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಇವತ್ತು ಸ್ಫೋಟಕ ತುಂಬಿದ್ದ ಲಾರಿಯೊಂದು ಕ್ವಾರಿಗೆ ಬಂದಿತ್ತು. ಈ ವೇಳೆ ಸ್ಪೋಟ ಸಂಭವಿಸಿದೆ. ‘ಜಿಲೆಟಿನ್ ತುಂಬಿದ್ದ ಲಾರಿ ಬಂದಿತ್ತು. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ದೇಹಗಳು ಪೀಸ್ ಪೀಸ್
ಸ್ಫೋಟದ ತೀವ್ರತೆಗೆ ಕ್ವಾರಿಯಲ್ಲಿದ್ದ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ನೂರಾರು ಮೀಟರ್ ಹಾರಿ ಬಂದು ಬಿದ್ದಿವೆ. ಮೃತರ ಗುರುತು ಹಿಡಿಯುವುದೆ ಕಷ್ಟವಾಗಿದೆ. ಕತ್ತಲಲ್ಲಿ ಮೃತದೇಹಗಳ ಪತ್ತೆ ಕಾರ್ಯ ಪೊಲೀಸರಿಗೆ ದೊಡ್ಡ ಸವಾಲಾಗಿದೆ.
ನೋ ಎಂಟ್ರಿ ಜೋನ್
ಕ್ವಾರಿ ಒಳಗೆ ಮತ್ತಷ್ಟು ಸ್ಫೋಟಕ ಇರುವ ಶಂಕೆ ಇದ್ದು, ಮತ್ತಷ್ಟು ಅನಾಹುತ ಸಂಭವಿಸುವ ಆತಂಕವಿದೆ. ಹಾಗಾಗಿ ಕ್ವಾರಿಯ ಒಳಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಮಾತ್ರ ಪ್ರವೇಶವಿದೆ. ಉಳಿದೆಲ್ಲರಿಗೂ ಪ್ರವೇಶ ನಿರ್ಬಂಧಿಸಲಾಗಿದೆ.
ಬೆಂಗಳೂರಿಂದ ಬರುತ್ತೆ ಟೀಮ್
ಘಟನೆಗೆ ಕಾರಣವೇನು, ಸ್ಫೋಟ ಸಂಭವಿಸಿದ್ದು ಹೇಗೆ ಅನ್ನುವ ಕುರಿತು ಪರಿಶೀಲನೆಗೆ ಅಧಿಕಾರಿಗಳ ತಂಡ ಆಗಮಿಸುತ್ತಿದೆ. ಬೆಂಗಳೂರಿನಿಂದ ಟೀಮ್ ಬರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ಆಕ್ರೋಶ
ಇನ್ನು, ಕ್ವಾರಿಯಲ್ಲಿ ಸ್ಫೋಟ ಸಂಭವಿಸುತ್ತಿದ್ದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ. ಜನರು ಕೂಡಲೆ ಕ್ವಾರಿ ಕಡೆ ಆಗಮಿಸಿದ್ದಾರೆ. ಭೀಕರತೆ ಕಂಡು ತಲ್ಲಣಗೊಂಡಿದ್ದಾರೆ. ಅಧಿಕಾರಿಗಳು ಬಂದ ವೇಳೆ, ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕ್ವಾರಿಗಳಿಂದಾಗಿ ಗ್ರಾಮಸ್ಥರಿಗೆ ಸಮಸ್ಯೆ ಆಗುತ್ತಿದೆ ಎಂದು ಮನವಿಗಳನ್ನು ಕೊಟ್ಟಾಗ ಯಾರೂ ಗಮನ ಹರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]