ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಕಲ್ಲಗಂಗೂರು ಕಲ್ಲು ಕ್ವಾರೆಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ಥಳೀಯರಾದ ಸಂದೀಪ್ ಎಂಬುವವರು ಈ ದೂರು ಸಲ್ಲಿಸಿದ್ದಾರೆ. ನಿಯಮ ಬಾಹಿರವಾಗಿ ಕಲ್ಲು ಕ್ವಾರೆ, ಕ್ರಷರ್ ನಡೆಸುತ್ತಿರುವ ಸಂಬಂಧ ಸಂದೀಪ್ ಅವರು 2013ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಜನವರಿ 29ಕ್ಕೆ ಅಂತಿಮ ವಿಚಾರಣೆಗೆ ದಿನಾಂಕ ನಿಗದಿಯಾಗಿತ್ತು.
ಸ್ಫೋಟದ ಬೆನ್ನಿಗೆ ದೂರು
ಕಲ್ಲಗಂಗೂರಿನಲ್ಲಿ ಸ್ಪೋಟ ಸಂಭವಿಸುತ್ತಿದ್ದಂತೆ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. 2013ರ ಪ್ರಕರಣಕ್ಕೆ ಇವರ ಹೆಸರನ್ನು ಸೇರಿಸಿಕೊಳ್ಳಬೇಕು ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಯಾರೆಲ್ಲ ಅಧಿಕಾರಿಗಳ ಮೇಲೆ ಕೇಸ್?
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ತಹಶೀಲ್ದಾರ್ ನಾಗರಾಜ್, ಪರಿಸರ ಅಧಿಕಾರಿ ಹರಿಶಂಕರ್, ಹಿರಿಯ ಭೂ ವಿಜ್ಞಾನಿ ರಾಂಜಿ ನಾಯ್ಕ, ಭೂ ವಿಜ್ಞಾನಿ ಜ್ಯೋತಿ, ಉಪ ಪರಿಸರ ಅಧಿಕಾರಿ ಶಿಲ್ಪಾ ಅವರ ವಿರುದ್ಧ ದೂರು ಸಲ್ಲಿಸಲಾಗಿದೆ.
ಸಂದೀಪ್ ಹೇಳಿಕೆಯ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]