SHIMOGA | ಶಿವಮೊಗ್ಗದಲ್ಲಿ 72ನೇ ವರ್ಷದ ಗಣರಾಜ್ಯೋತ್ಸವ, ಸಚಿವರಿಂದ ಧ್ವಜಾರೋಹಣ, ಪಥಸಂಚನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JANUARY 2021

ಶಿವಮೊಗ್ಗದಲ್ಲಿ ಇವತ್ತು 72ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಧ್ವಜಾರೋಹಣ ನೆರವೇರಿಸಿದರು.

ಪೊಲೀಸರಿಂದ ಪಥಸಂಚಲನ

ಜಿಲ್ಲಾ ಪೊಲೀಸ್ ವತಿಯಿಂದ ಡಿಎಆರ್ ಮೈದಾನದಲ್ಲಿ ಪಥ ಸಂಚಲನ ನಡೆಯಿತು. ವಿವಿಧ ಪೊಲೀಸ್ ತುಕಡಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಮಿನಿಸ್ಟರ್ ಸಂದೇಶ

ಬಳಿಕ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಸ್ಮರಿಸುವ ಉದ್ದೇಶದಿಂದ ಇವತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಎಲ್ಲೆಡೆ ಕಡ್ಡಾಯವಾಗಿ ನಮನ ಸಲ್ಲಿಸಲಾಗುತ್ತಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ದೊರಕಿದೆ.

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ. ಈ ವರ್ಷ 119 ಕೋಟಿ ರೂ. ಸಂದಾಯ ಮಾಡಲಾಗಿದೆ.

ಭದ್ರಾವತಿಯಲ್ಲಿ ಆರ್‍ಎಎಫ್ ಬಟಾಲಿಯನ್ ಸ್ಥಾಪನೆ, ಕೇಂದ್ರಿ ವಿದ್ಯಾಲಯಗಳು, ವಿಮಾನ ನಿಲ್ದಾಣ, ಶಿವಮೊಗ್ಗ ನಗರದಲ್ಲಿ ಹೊರ ವರ್ತುಲ ರಸ್ತೆಗಳು, ಶಿವಮೊಗ್ಗ – ತುಮಕೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ, ಶಿವಮೊಗ್ಗ – ಚಿತ್ರದುರ್ಗ ರಸ್ತೆ, ಸಿಗಂದೂರು ಸೇತುವೆ ಯೋಜನೆಗಳು ಜಿಲ್ಲೆಯಲ್ಲಿ ಅಭಿವೃದ್ಧಿ ವೇಗ ಹೆಚ್ಚಿಸಿದೆ.

ಕೈಗಾರಿಕೆಗಳ ಅಭಿವೃದ್ಧಿಗಾಗಿ ಸಾಗರ ರಸ್ತೆಯ ಕೈಗಾರಿಕಾ ವಸಾಹತಿನಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಇದಕ್ಕಾಗಿ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಚುರಕುಗೊಂಡಿದೆ. 217 ಕೋಟಿ ರೂ. ವೆಚ್ಚ ಮಾಡಿ, 42 ಕಾಮಗಾರಿ ಪೂರ್ಣಗೊಂಡಿದೆ.

ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 26, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment