SHIMOGA | ಅಡಕೆ ಮಾದಕ ವಸ್ತು, ಸರ್ಕಾರಿ ವೆಬ್‌ಸೈಟ್‌ನಲ್ಲೇ ಪ್ರಮಾದ, ಬೆಳೆಗಾರರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021

ಅಡಕೆ ಕ್ಯಾನ್ಸರ್‍ಕಾರಕ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದ್ದರಿಂದ ಬೆಳೆಗಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ನಡುವೆ ರಾಜ್ಯ ಸರ್ಕಾರದ ವೆಬ್‍ಸೈಟ್‍ ಒಂದರಲ್ಲಿ ಅಡಕೆಗೆ ಡ್ರಗ್ಸ್ ಪಟ್ಟ ನೀಡಲಾಗಿದೆ. ಇದರಿಂದ ಬೆಳೆಗಾರರು ಮತ್ತಷ್ಟು ಗೊಂದಲಕ್ಕೀಡಾಗಿದ್ದಾರೆ.

ಯಾವುದದು ವೆಬ್‍ಸೈಟ್‍?

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ವೆಬ್‍ಸೈಟ್‍ನಲ್ಲಿ ಅಡಕೆಗೆ ಡ್ರಗ್ಸ್ ಪಟ್ಟ ನೀಡಲಾಗಿದೆ. ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆ, ಕೃಷಿ ಸಂಬಂಧಿತ ನಿಯಮಗಳು ಸೇರಿದಂತೆ ಕೃಷಿ ಕುರಿತು ಹಲವು ಮಾಹಿತಿ ಈ ವೆಬ್‍ಸೈಟ್‍ನಲ್ಲಿ ಪ್ರಕಟವಾಗುತ್ತದೆ. ಇದೆ ವೆಬ್‍ಸೈಟ್‍ನ ‘ಔಷಧ ಮತ್ತು ಮಾದಕ ಉತ್ತೇಜಕ’ ಕಾಲಂನಲ್ಲಿ ಅಡಕೆಯನ್ನು ಸೇರಿಸಿ ಗೊಂದಲ ಸೃಷ್ಟಿಸಲಾಗಿದೆ.

ಧಾರಣೆ ಹೆಚ್ಚುತ್ತಿರುವ ಹೊತ್ತಲ್ಲಿ

ಅಡಕೆ ಹಾನಿಕಾರಕ, ಕ್ಯಾನ್ಸರ್‍ಕಾರಕ ಎಂಬ ವಿವಾದದ ನಡುವೆಯು ಉತ್ತಮ ಧಾರಣೆ ಲಿಭಿಸಿದೆ. ಈ ಹೊತ್ತಲ್ಲಿ ಅಡಕೆಯನ್ನು ‘ಔಷಧ ಮತ್ತು ಮಾದಕ ಉತ್ತೇಜಕ’ ಕೆಟಗರಿ ಅಡಿ ಸೇರಿಸಲಾಗಿದೆ. ವಿಪರ್ಯಾಸ ಅಂದರೆ ವೀಳ್ಯೆದೆಲೆಯು ಈ ಕೆಟಗರಿಯಲ್ಲಿದೆ.

142288715 1317539511940799 5437525663905207453 n.jpg? nc cat=100&ccb=2& nc sid=730e14& nc ohc=TW5kMRHuIwAAX qVEKy& nc ht=scontent.fblr1 6

ಔಷಧಿ ಹೌದು, ಆದರೆ ಮಾದಕವೇಕೆ?

ಔಷಧ ಮತ್ತು ಮಾದಕ ವಸ್ತುಗಳ ಕೆಟಗರಿಯಲ್ಲಿ ಅಡಕೆ, ವೀಳ್ಯೆದೆಲೆ ಮತ್ತು ತಂಬಾಕು ಇದೆ. ಈ ಪೈಕಿ ವೀಳ್ಯೆದೆಲೆ ಮತ್ತು ಅಡಕೆಗೆ ಔಷಧೀಯ ಗುಣವಿದೆ. ನಾಟಿ ಮತ್ತು ಆಯುರ್ವೇದ ಪದ್ಧತಿಯಲ್ಲಿ ಇವೆರಡನ್ನು ಬಳಸಲಾಗುತ್ತದೆ. ಆದರೆ ಇವೆರಡನ್ನು ಮಾದಕ ವಸ್ತು ಕೆಟಗರಿಯಲ್ಲಿ ಸೇರ್ಪಡೆ ಮಾಡಿರುವುದು ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.

141560800 1317539515274132 5862161548687824997 n.jpg? nc cat=110&ccb=2& nc sid=730e14& nc ohc=wA7PU9AyZJEAX9mUw O& nc ht=scontent.fblr1 5

ಏನಂತಾರೆ ಅಧಿಕಾರಿಗಳು?

ಈ ಗೊಂದಲ ಕುರಿತು ಪತ್ರಿಕೆಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಕಣ್ತಪ್ಪಿನಿಂದಾಗಿ ಇಂತಹ ಗೊಂದಲವಾಗಿದೆ. ಇದನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ. ಸರ್ಕಾರಿ ವೆಬ್‍ಸೈಟ್‍ನಲ್ಲಿ  ಇಂತಹ ತಪ್ಪುಗಳು ಆಗದಂತೆ ಕ್ರಮ ವಹಿಸಬೇಕಿದೆ. ಈಗಾಗಲೆ ಭೀತಿಯಲ್ಲಿರುವ ಬೆಳೆಗಾರರಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗದಂತೆ ಗಮನಿಸಬೇಕಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2021

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment