SHIMOGA | ಎಸ್ಸಿ, ಎಸ್ಟಿ ಸಭೆಯಲ್ಲೂ ಕಲ್ಲಗಂಗೂರು ಸ್ಪೋಟದ ಚರ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021

ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆಯಲ್ಲೂ ಕಲ್ಲಗಂಗೂರು ಕಲ್ಲು ಗಣಿ ಸ್ಫೋಟ ಪ್ರಕರಣ ಪ್ರತಿಧ್ವನಿಸಿತು. ಈ ಸಮುದಾಯಕ್ಕೆ ಸೇರಿದ ಹಲವರು ಮನೆ ಕಳೆದುಕೊಳ್ಳುವ ಆತಂವಿದ್ದು, ಪರಿಹಾರ ನೀಡುವ ಕುರಿತು ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಸಭೆಯಲ್ಲಿ ಬೇಸರ ವ್ಯಕ್ತಪಡಿಸಿಲಾಯಿತು.

ಡಿಎಆರ್‍ ಸಭಾಂಗಣದಲ್ಲಿ ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸೋಮಶೇಖರ್‍ ಎಂಬುವವರು, ಸ್ಫೋಟದಿಂದಾಗಿ ಹುಣಸೋಡು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಹಲವರು ಮನೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಯಾರಿಗೂ ಈತನಕ ಪರಿಹಾರ ಸಿಕ್ಕಿಲ್ಲ ಎಂದರು.

ಕಲ್ಲಗಂಗೂರಿನ ತಿಮ್ಮರಾಜು ಎಂಬುವವರು ಮಾತನಾಡಿ, ಅಕ್ರಮ ಕಲ್ಲು ಕ್ವಾರಿಗಳ ಮೇಲಕೆ ದಾಳಿ ನಡೆಸುತ್ತಿರುವ ಪೊಲೀಸರು, ಬಡ ಕಾರ್ಮಿಕರ ಮೇಲೆ ಕೇಸು ಹಾಕುತ್ತಿದ್ದಾರೆ ಎಂದು ದೂರಿದರು.

ಸಮಸ್ಯೆ ಆಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸ್ಪೋಟ ಪ್ರಕರಣ ಸದ್ಯ ತನಿಖೆ ಹಂತದಲ್ಲಿದೆ. ಈ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.

ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಂದು ಕೊರತೆ ಸಭೆಗಳನ್ನು ಆಯೋಜಿಸಬೇಕು ಸೇರಿದಂತೆ ಹಲವು ಸಲಹೆಗಳು, ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡವರು ತಿಳಿಸಿದರು.

ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment