SHIMOGA | ಮೇಲಿನ ಹನಸವಾಡಿಯಲ್ಲಿ ಭೀಕರ ಅಪಘಾತ, ಬೈಕ್ ಸವಾರರ ದೇಹಗಳು ಪೀಸ್ ಪೀಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ. ಮೇಲಿನ ಹನಸವಾಡಿ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.

ಮೃತರನ್ನು ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು (21) ಎಂದು ಗುರುತಿಸಲಾಗಿದೆ. ಯುವತಿಯ ಗುರುತು ಪತ್ತೆ ಹಚ್ಚಲಾಗುತ್ತಿದೆ.

ಹೇಗಾಯ್ತು ಆಪಘಾತ?

ಕೆಎಸ್‍ಆರ್‍ಟಿಸಿ ಬಸ್ಸು ಶಿವಮೊಗ್ಗದಿಂದ ಹರಿಹರ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಢಿಕ್ಕಿಯ ತೀವ್ರತೆಗೆ ಬೈಕ್‍ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೆ ಭಾರಿ ಪ್ರಮಾಣದ ಹಾನಿಯಾಗಿದೆ.

ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment