SHIMOGA |ಬೇಸಿಗೆಯಲ್ಲಿ ಭತ್ತ ಬೆಳೆಯಬೇಡಿ, ಬೆಳೆ ಹಾನಿಯಾದರೆ ಇಲಾಖೆ ಜವಾಬ್ದಾರಿಯಲ್ಲ, ರೈತರಿಗೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

(FILE PHOTO)

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021

ತುಂಗಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲಾಗುತ್ತಿದೆ.

ಬೇಸಿಗೆಯಲ್ಲಿ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗಾಗಿ ನೀರಿನ ಶೇಖರಣೆ ಅತ್ಯವಶಕ್ಯಕವಾಗಿದೆ. ತೋಟಗಾರಿಕೆ ಹಾಗೂ ನಿಂತ ಬೆಳೆಗಳಿಗೆ ಮಾತ್ರ ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ ಎಂದು ನೀರಾವರಿ ನಿಗಮ ತಿಳಿಸಿದೆ.

ಈ ಭಾಗಗಳಲ್ಲಿ ಭತ್ತದ ಬೆಳೆಗೆ ನೀರನ್ನು ಪೂರೈಸಲು ಸಾಧ್ಯ ಆಗುವುದಿಲ್ಲ. ಆದ್ದರಿಂದ ರೈತರು ಬೇಸಿಗೆಯಲ್ಲಿ ಭತ್ತದ ಬೆಳೆ ಬೆಳೆಯಬಾರ ಎಂದು ಸೂಚನೆ ನೀಡಲಾಗಿದೆ.

ಭತ್ತ ಬೆಳೆದು ಹಾನಿಯಾದಲ್ಲಿ ಬೆಳೆ ಪರಿಹಾರಕ್ಕೆ ಇಲಾಖೆ ಜವಾಬ್ದಾರಿ ಆಗುವುದಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

144230336 1320496224978461 7510471834830533837 n.jpg? nc cat=105&ccb=2& nc sid=730e14& nc ohc=jsM9AiKZgQ4AX9sUKjy& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment