ಶಿವಮೊಗ್ಗ ಲೈವ್.ಕಾಂ | SAGARA NEWS | 02 FEBRUARY 2021
ಸಾಲ ಹಿಂತಿರುಗಿಸಲಾಗಿದೆ ರೈತರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ರೈತ ಎಂ.ಆರ್.ಉಮೇಶ್ ಗೌಡ (60) ಆತ್ಮಹತ್ಯೆ ಮಾಡಿಕೊಂಡವರು.
ಉಮೇಶ್ ಗೌಡ ಅವರು ಬಹುಹೊತ್ತು ಮನೆಯಲ್ಲಿ ಕಾಣಿಸದ ಹಿನ್ನೆಲೆ, ಮನೆಯವರು ಎಲ್ಲೆಡೆ ಹುಡುಕಾಡಿದ್ದಾರೆ. ಮನೆ ಹಿಂಭಾಗ ಖಾಲಿ ಜಾಗದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಕಂಡು ಬಂದಿದೆ. ಕೂಡಲೆ ಅವರನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಉಮೇಶ್ ಅವರಿಗೆ ಮೂರು ಎಕರೆ ತೋಟ ಮತ್ತು ಗದ್ದೆ ಇದೆ. ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಸ್ಥೆ ಮತ್ತು ಕೈಗಡ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ಹಿಂತಿರುಗಿಸಲಾಗದೆ ಚಿಂತೆಗೀಡಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]