BHADRAVATHI | ದೊಡ್ಡೇರಿ ಬಳಿ ಭೀಕರ ಅಪಘಾತ, ಹೊಸಮನೆಯ ಯುವಕ ಸೇರಿ ಇಬ್ಬರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 03 FEBRUARY 2021

ಟ್ರಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಭದ್ರಾವತಿಯ ಹೊಸಮನೆ ನಿವಾಸಿ ರಘು (32) ಮತ್ತು ತರೀಕೆರೆಯ ಇಟಿಗಿ ಗ್ರಾಮದ ಶಿವು (30) ಮೃತರು.

ಭದ್ರಾವತಿಯಿಂದ ಶಿವನಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರಾಕ್ಟರ್ ಮತ್ತು ದೊಡ್ಡೇರಿ ಗ್ರಾಮದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ರಘು ಮತ್ತು ಶಿವು ಮೃತಪಟ್ಟಿದ್ದಾರೆ.

ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ದೇವರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment