SHIKARIPURA | ಕಳ್ಳಭಟ್ಟಿ ಅಡ್ಡೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಬೆಲ್ಲದ ಕೊಳೆ ವಶಕ್ಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 04 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 315 ಲೀಟರ್‍ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆದಿದ್ದಾರೆ.

ಶಿಕಾರಿಪುರದ ಚಿಕ್ಕಮಾಗಡಿ ತಾಂಡ ಸಮೀಪದ ಜವಳಕಟ್ಟೆ ಕೆರೆ ಮತ್ತು ಕರೇಕಟ್ಟೆ ಕೆರೆಯ ದಡದಲ್ಲಿ ಕಳ್ಳಭಟ್ಟಿ ತಯಾರಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ  ಅಬಕಾರಿ ಇಲಾಖೆ ಅಧಿಕಾರಿಗಳು ಎರಡು ಕಡೆ ದಾಳಿ ನಡೆಸಿದ್ದರು.

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಕೆರೆ ದಂಡೆಯಲ್ಲಿ ಬಿಂದಿಗೆಗಳಲ್ಲಿ ಬೆಲ್ಲದ ಕೊಳೆಯನ್ನು ಸಂಗ್ರಹಿಸಿ ಇರಿಸಲಾಗಿತ್ತು. 315 ಲೀಟರ್ ಬೆಲ್ಲದ ಕೊಳೆ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಕಳ್ಳಭಟ್ಟಿ ಪತ್ತೆ ಸಂಬಂಧ ಎರಡು ಪ್ರಕರಣ ದಾಖಲಾಗಿದೆಎಂದು ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ತಿಳಿಸಿದ್ದಾರೆ.

ಇನ್ನು, ಚಿಕ್ಕಮಾಗಡಿ ಗ್ರಾಮದಲ್ಲಿ ಕಳ್ಳಭಟ್ಟಿ ದಂಧೆ ಮತ್ತು ಅಪಾಯದ ಕುರಿತು ಚಿಕ್ಕಮಾಗಡಿ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಯಿತು. ಕಳ್ಳಭಟ್ಟಿ ತಯಾರಿಸುವವರ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.

ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಅವರ ಮುಂದಾಳತ್ವದಲ್ಲಿ ದಾಳಿ ನಡೆಸಲಾಗಿತ್ತು. ಶಿವಮೊಗ್ಗದ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment