ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021
ಇವತ್ತು ರಾಮಾರ್ಜುನ ಸಿನಿಮಾ ಟೀಮ್ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಭಾರತ್ ಸಿನಿಮಾಸ್‍ನಲ್ಲಿ ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದರು.
ಸಿಟಿ ಸೆಂಟರ್ ಮಾಲ್‍ನ ಭಾರತ್ ಸಿನಿಮಾಸ್‍ನಲ್ಲಿ ರಾಮಾರ್ಜುನ ಸಿನಿಮಾದ ನಟ, ನಿರ್ದೇಶಕ ಅನೀಶ್ ತೇಜೇಶ್ವರ್, ನಟಿ ನಿಶ್ವಿಕಾ ನಾಯ್ಡು ಅವರು ಸಿನಿಮಾ ವೀಕ್ಷಿಸಿದರು.
ಹೌಸ್ ಫುಲ್ ಪ್ರದರ್ಶನಕ್ಕೆ ಖುಷಿ
ಬಳಿಕ ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ನಟ ಅನೀಶ್ ತೇಜೇಶ್ವರ್, ರಾಮಾರ್ಜುನ ಸಿನಿಮಾಗೆ ಶಿವಮೊಗ್ಗದಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಷೋಗಳ ಸಂಖ್ಯೆಯು ಹೆಚ್ಚಳವಾಗಿದೆ. ರಾಜ್ಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದೆ. ಮೊದಲ ವಾರದಲ್ಲಿ ಸಿನಿಮಾ ವೀಕ್ಷಿಸಿದವರೆಲ್ಲ ಉತ್ತಮ ರೆಸ್ಪಾನ್ಸ್ ನೀಡಿದ್ದಾರೆ. ಹಾಗಾಗಿ ಈ ವಾರದಿಂದ ಮತ್ತಷ್ಟು ಜನರು ಚಿತ್ರಮಂದಿರದ ಕಡೆಗೆ ಬರುತ್ತಿದ್ದಾರೆ’ ಎಂದರು.
ನಟಿ ನಿಶ್ವಿಕಾ ನಾಯ್ಡು ಮಾತನಾಡಿ, ಶಿವಮೊಗ್ಗದಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಬಿಡುಗಡೆಯಾದ ಮಿಡ್ ವೀಕ್‍ನಲ್ಲಿ ಷೋಗಳ ಸಂಖ್ಯೆ ಹೆಚ್ಚಳವಾಗಿದೆ. ಮೈಸೂರು, ಮಂಡ್ಯದಲ್ಲೂ ಕೂಡ ಸಿನಿಮಾದ ಷೋಗಳ ಸಂಖ್ಯೆ ಹೆಚ್ಚಳವಾಗಿದೆ ಎಂದರು.
ಅಭಿಮಾನಿಗಳ ಜೊತೆ ಸೆಲ್ಫಿ
ಇನ್ನು, ಸಿಟಿ ಸೆಂಟರ್ ಮಾಲ‍್‍ಗೆ ನಟ ಅನೀಶ್, ನಟಿ ನಿಶ್ವಿಕಾ ಅವರ ಭೇಟಿ ನೀಡಿದ ವಿಚಾರ ತಿಳಿದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು. ನಟ ಅನೀಶ್, ನಟಿ ನಿಶ್ವಿಕಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






