ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021
ಸಂಚಾರ ದಟ್ಟಣೆ ನಿಯಂತ್ರಿಸಲು ಶಿವಮೊಗ್ಗದಲ್ಲಿ ತುಂಗಾ ನದಿಗೆ ಅಡ್ಡಲಾಗಿ ಮತ್ತೊಂದು ಸೇತುವೆ ನಿರ್ಮಿಸಲು ನಿರ್ಧರಿಸಲಾಗಿದೆ. 20 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಲಿದೆ.
ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಹೊಸ ಸೇತುವೆ ನಿರ್ಮಾಣವಾಗಲಿದೆ. ಈಗಾಗಲೇ ಇಲ್ಲಿ ಒಂದು ಸೇತುವೆ ಇದೆ. ಆದರೆ ವಾಹನ ದಟ್ಟಣೆ, ಭವಿಷ್ಯದ ದೃಷ್ಟಿಯಿಂದ ಮತ್ತೊಂದು ಸೇತುವೆ ನಿರ್ಮಿಸಲು ಯೋಜಿಸಲಾಗಿದೆ.
‘ತುಂಗಾ ನದಿಗೆ ಮತ್ತೊಂದು ಸೇತುವೆ ನಿರ್ಮಾಣಕ್ಕೆ 20 ಕೋಟಿ ರೂ. ಬಿಡುಗಡೆ ಮಾಡಲು ಕ್ಲಿಯರೆನ್ಸ್ ಸಿಕ್ಕಿದೆ. ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತದೆ. ಭವಿಷ್ಯದ ಸಂಚಾರ ದಟ್ಟಣೆಯನ್ನು ಗಮನದಲ್ಲಿ ಇರಿಸಿಕೊಂಡು ಈ ಸೇತುವೆ ನಿರ್ಮಾಣವಾಗಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಬೈಪಾಸ್ ರಸ್ತೆಯಲ್ಲಿ ಈಗ ಇರುವ ಸೇತುವೆಯ ಯಾವ ಭಾಗದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಬೇಕು ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಂತಿಮ ಹಂತದ ರೂಪುರೇಷ ಸಿದ್ಧವಾದ ಬಳಿಕ ಹೊಸ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಲಿದೆ.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






