ಸಿದ್ದರಾಮಯ್ಯ ಭೇಟಿಯಾದ ಶಿವಮೊಗ್ಗ ಯುವ ಕಾಂಗ್ರೆಸ್ ಟೀಮ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 FEBRUARY 2021

ಆಂತರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ನೇತೃತ್ವದಲ್ಲಿ ಬೆಂಗಳೂರಿನ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯುವಕರ ಸಂಘಟನೆಯನ್ನು ಬಲಿಷ್ಠವಾಗಿ ಮಾಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಯನ್ನು ಖಂಡಿಸಬೇಕು. ಈಗ ರೈತರು, ಜನವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಮಾರ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಶಿವಮೊಗ್ಗ ಉತ್ತರ ಬ್ಲಾಕ್ ಅಧ್ಯಕ್ಷ ಬಿ.ಲೋಕೇಶ್, ಶಿವಮೊಗ್ಗ ಗ್ರಾಮಾಂತರ ಹೊಳೆಹೊನ್ನೂರು ಬ್ಲಾಕ್ ಅಧ್ಯಕ್ಷ ಈ.ಟಿ.ನಿತಿನ್, ಭದ್ರಾವತಿ ನಗರ ಬ್ಲಾಕ್ ಅಧ್ಯಕ್ಷ ಜಿ.ವಿನೋದ್ ಕುಮಾರ್, ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಬಾಳೆಗುಂಡಿ, ಗಣೇಶ್ ಎಪಿ, ವರುಣ್, ಮಹೇಂದ್ರ ಜೈನ್ ಸೇರಿದಂತೆ ಹಲವರು ಇದ್ದರು.

146786474 1324969104531173 3498445803935150522 o.jpg? nc cat=108&ccb=2& nc sid=730e14& nc ohc=yqSCEcAOjgoAX8Up VD& nc ht=scontent.fblr4 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment