ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021
ಹೊಸ ವರ್ಷದ ದಿನ ಶಿವಮೊಗ್ಗದ ಸೂಪರ್ ಮಾರ್ಕೆಟ್ ಒಂದರ ಕಿಟಕಿ ಮುರಿದು ಒಳ ನುಗ್ಗಿ ಕಳ್ಳತನ ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತುಮಕೂರು ಜಿಲ್ಲೆ ಮಧುಗಿರಿಯ ಉದಯ್ ಕುಮಾರ್ (29) ಬಂಧಿತ ಆರೋಪಿ. ಜನವರಿ 1ರಂದು ಶಿವಮೊಗ್ಗದ ರೆಡ್ ಪಾಂಡಾ ಸೂಪರ್ ಮಾರ್ಕೆಟ್‍ನ ಕಿಟಕಿ ಮುರಿದು ಒಳ ಪ್ರವೇಶಿಸಿದ್ದ. 3.85 ಲಕ್ಷ ರೂ. ಕಳ್ಳತನ ಮಾಡಿದ್ದ.
ಉದಯ್ ಕುಮಾರ್‍ನಿಂದ 1.80 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಡಿವೈಎಸ್‍ಪಿ ಉಮೇಶ್ ಈಶ್ವರ ನಾಯಕ್, ಇನ್ಸ್ ಪೆಕ್ಟರ್ ವಸಂತ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಮಂಜಮ್ಮ, ಎಎಸ್ಐ ವಾಚಾನಾಯ್ಕ, ರಮೇಶ್, ನಿತಿನ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]