BREAKING NEWS | ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021

ಶಿವಮೊಗ್ಗ ಪೊಲೀಸರ ಬಂದೂಕು ಮತ್ತೆ ಸದ್ದು ಮಾಡಿದೆ. ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ರೌಡಿ ಶೀಟರ್‍ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯಾರಿದು ರೌಡಿ ಶೀಟರ್?

ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗನ ಕಾಲಿಗೆ ಪೊಲೀಸರು ಫೈರ್ ಮಾಡಿದ್ದಾರೆ. ಪ್ರಕರಣವೊಂದರ ಸಂಬಂಧ ರೌಡಿ ಶೀಟರ್‍ ದೀಪುನನ್ನು ಬಂಧಿಸಲು ತೆರಳಿದಾಗ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಫೈರಿಂಗ್ ಮಾಡಲಾಗಿದೆ.

ಹೇಗಾಯ್ತು ಘಟನೆ?

ಅನುಪಿನಕಟ್ಟೆಯಲ್ಲಿ ರೌಡಿ ಶೀಟರ್‍ ದೀಪು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ದೀಪಕ್ ಮತ್ತು ಸಿಬ್ಬಂದಿಗಳು ಆತನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಹೆಡ್‍ ಕಾನ್ಸ್‍ ಟೇಬಲ್ ಅರುಣ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಹಾಗಾಗಿ ಶರಣಾಗುವಂತೆ ಇನ್ಸ್ ಪೆಕ್ಟರ್ ದೀಪಕ್ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಇದಕ್ಕೆ ಕ್ಯಾರೆ ಅನ್ನದೆ ಎಸ್ಕೇಪ್ ಆಗಲು ಯತ್ನಿಸಿದಾಗ ರೌಡಿ ಶೀಟರ್ ದೀಪು ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

ಯಾರಿದು ದೀಪು ಅಲಿಯಾಸ್ ಡಿಂಗ?

ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗ, ಕುಖ್ಯಾತ ರೌಡಿ ಬಚ್ಚನ್ ಗ್ಯಾಂಗ್‍ನ ಸದಸ್ಯ. ಹಣಕ್ಕಾಗಿ ಇತ್ತೀಚೆಗೆ ಗ್ಯಾಂಗ್ ಕಟ್ಟಿಕೊಂಡು ಹೋಗಿ, ಟಿಪ್ಪು ನಗರದ ವ್ಯಾಪಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ, ಸಹೋದರರ ಮೇಲೆ ಹಲ್ಲೆ ಮಾಡಿದ್ದ. ಈ ಪ್ರಕರಣ ಸಂಬಂಧ ರೌಡಿ ಶೀಟರ್‍ ದೀಪುನನ್ನು ಬಂಧಿಸಲು ತುಂಗಾ ನಗರ ಠಾಣೆ ಪೊಲೀಸರು ತೆರಳಿದ್ದರು.

ರೌಡಿ ಶೀಟರ್ ದೀಪು ಈ ಹಿಂದೆ ರೌಡಿ ಶೀಟರ್‍ ಲೋಕಿ ಜೊತೆ ಗುರುತಿಸಿಕೊಂಡಿದ್ದ. ಮೆಂಟಲ್ ಸೀನ, ಮೋಟಿ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಡಿವೈಎಸ್‍ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಗೊಂಡಿರುವ ಹೆಡ್ ಕಾನ್ಸ್ ಟೇಬಲ್ ಅರುಣ್ ಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

151353612 1331584773869606 2744513446459448668 o.jpg? nc cat=107&ccb=3& nc sid=730e14& nc ohc=I3vsmmlt7zsAX vd5HB& nc ht=scontent.fblr4 2

151158819 1331584927202924 5490577798590000903 o.jpg? nc cat=101&ccb=3& nc sid=730e14& nc ohc=5uBe DURW7oAX 8TfAJ& nc ht=scontent.fblr4 1

150078857 1331584783869605 5185580540496643037 o.jpg? nc cat=102&ccb=3& nc sid=730e14& nc ohc=prHwfzSp5TMAX8A p52& nc ht=scontent.fblr4 1

150906675 1331584803869603 184168906904042789 o.jpg? nc cat=107&ccb=3& nc sid=730e14& nc ohc=y2XLp2XkmkAAX tY8uJ& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment