ಮಳೆಗೆ ಚಾನೆಲ್ ಕಾಂಪೌಂಡ್ ಕುಸಿದು ಮನೆಗಳಿಗೆ ನೀರು, ಈತನಕ ಕ್ಯಾರೆ ಅನ್ನದ ಅಧಿಕಾರಿಗಳು, ಕೇಳೋರಿಲ್ಲ ಜನರ ಗೋಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 FEBRUARY 2021

ರಾತ್ರಿ ಸುರಿದ ಭಾರಿ ಮಳೆಗೆ ಚಾನಲ್‍ನ ತಡೆಗೋಡೆ ಕುಸಿದು, 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ನೀರನ್ನು ಮನೆಯಿಂದ ಹೊರಗೆ ಹಾಕುತ್ತಲೇ ಜನರು ರಾತ್ರಿ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳ್ಯಾರು ತಮ್ಮ ನೆರವಿಗೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೇಗಾಯ್ತು ಘಟನೆ?

ಶಿವಮೊಗ್ಗದ ವಿದ್ಯಾನಗರದ ಸುಭಾಷ್ ನಗರದಲ್ಲಿ ಚಾನಲ್‍ನ ತಡೆಗೋಡೆ ಕುಸಿದಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಕಾಂಪೌಂಡ್ ಪಕ್ಕದಲ್ಲೇ ಇರುವ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ.

ರಾತ್ರಿ ಇಡೀ ಜಾಗರಣೆ

ನೀರು ನುಗ್ಗುತ್ತಿದ್ದಂತೆ ಸ್ಥಳೀಯರು ಆತಂಕಗೊಂಡಿದ್ದಾರೆ. ಮನೆಯಿಂದ ನೀರು ಹೊರಗೆ ಹಾಕಲು ಹರಸಾಹಸ ಮಾಡಿದ್ದಾರೆ.

ದಿಢೀರ್ ನೀರು ನುಗ್ಗಿದ್ದರಿಂದ ಮನೆಯೊಳಗಿನ ವಸ್ತುಗಳು ಜಲಾವೃತವಾಗಿದೆ. ದಿನಸಿ, ಬಟ್ಟೆಗಳು ಸೇರಿದಂತೆ ಹಲವು ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಚಾನೆಲ್‍ನಿಂದ ಮತ್ತಷ್ಟು ನೀರು ಮನೆಗಳಿಗೆ ನುಗ್ಗದಂತೆ ತಡೆಯಲು, ಸ್ಥಳೀಯರೆ ಗೋಡೆಗೆ ಕಲ್ಲುಗಳನ್ನು ಅಡ್ಡಲಾಗಿ ಇರಿಸಿ, ನೀರಿನ ರಭಸ ತಡೆಯುವಲ್ಲಿ ಸಫಲರಾಗಿದ್ದಾರೆ.

ಯಾರೊಬ್ಬರೂ ಫೋನ್ ರಿಸೀವ್ ಮಾಡ್ಲಿಲ್ಲ

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಸೇರಿದಂತೆ ಹಲವು ಕಡೆಗೆ ಕರೆ ಮಾಡಿದ್ದಾರೆ. ಆದರೆ ಯಾರೊಬ್ಬರೂ ಸ್ಪಂದಿಸಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಅಸಹಾಯಕರಾದರು. ಜನರ ರಕ್ಷಣೆ ಬಗ್ಗೆ ಮಾತ್ರ ಗಮನ ಹರಿಸಿದರು ಅನ್ನುತ್ತಾರೆ ಸ್ಥಳೀಯರು.

ಏನಿದು ಚಾನಲ್? ಗೋಡೆ ಕುಸಿಯಲು ಕಾರಣವೇನು?

ಸಂತೆ ಕಡೂರಿನಿಂದ ಪುರಲೆವರೆಗೂ ಚಾನೆಲ್ ಇದೆ. ಇತ್ತೀಚೆಗಷ್ಟೆ ಈ ಚಾನೆಲ್‍ನ ದುರಸ್ಥಿ ಕಾರ್ಯ ನಡೆಯಿತು. ಎತ್ತರದ ಕಾಂಪೌಂಡ್ ನಿರ್ಮಿಸಲಾಗಿದೆ. ಕಾಂಪೌಂಡ್ ಗೋಡೆಯ ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ನಿನ್ನೆ ಸುರಿದ ಮಳೆಗೆ ಕುಸಿದು ಬಿದ್ದಿದೆ. ಇದರಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಈತನಕ ಬಂದಿಲ್ಲ ಅಧಿಕಾರಿಗಳು

ಘಟನೆ ನಡೆದು ಇಷ್ಟು ಹೊತ್ತಾದರೂ ಈತನಕ ಯಾರೊಬ್ಬರು ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ದಿನಸಿ ಸೇರಿದಂತೆ ಹಲವು ವಸ್ತುಗಳು ಕೊಚ್ಚಿ ಹೋಗಿರುವುದರಿಂದ, ಬೆಳಗಿನ ತಿಂಡಿಗೂ ಜನರು ಸಂಕಷ್ಟ ಪಡುವಂತಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 22, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment