ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ರೈಲು ತಡೆಗೆ ಮುಂದಾದರು.
ತೈಲೋತ್ಪನ್ನಗಳ ಬೆಲೆ ಏರಿಕೆ, ಅಗತ್ಯ ವಸ್ತುಗಳು ದರವು ಗಗನ ಮುಟ್ಟಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾರಿಕೇಡ್ ಹಾಕಿ ಬಂದ್
ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಗೆ ಮುಂದಾದ ಹಿನ್ನೆಲೆ ರೈಲ್ವೆ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಬ್ಯಾರಿಕೇಡ್‍ಗಳನ್ನು ಹಾಕಲಾಗಿತ್ತು. ಇದನ್ನು ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ಸಂಭಿವಿಸಿತು.
ಬಿಜೆಪಿ ವಿರುದ್ಧ ಘೋಷಣೆ
ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನರು ಬದುಕು ನಡೆಸುವುದೇ ಕಷ್ಟವಾಗಿದೆ. ಅಚ್ಚೇ ದಿನ್ ಅಂತಾ ಹೇಳುತ್ತಾ ಮೋದಿ ಸರ್ಕಾರ ಜನರ ಭವಿಷ್ಯವನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರಮೇಶ್ ಹೆಗಡೆ, ಯಮುನಾ ರಂಗೇಗೌಡ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಪ್ರವೀಣ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]