ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ವಿರೋಧಿಸಿ ಇವತ್ತು ದೇಶಾದ್ಯಂತ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿಯೂ ಲಾರಿಗಳು ರಸ್ತೆಗಿಳಿಯದೆ, ಮುಷ್ಕರ ನಡೆಸಲಾಗುತ್ತಿದೆ.
ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಇರುವ ಗೂಡ್ಸ್ ಶೆಡ್ನಲ್ಲಿ ಲಾರಿಗಳನ್ನು ನಿಲ್ಲಿಸಲಾಗಿದೆ. ನೂರಾರು ಲಾರಿಗಳು ಇಲ್ಲಿ ನಿಲ್ಲಿಸಲಾಗಿದೆ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೆ ಅಡ್ಡಿಯಿಲ್ಲ.
ವಿಮೆ ಹೆಚ್ಚಳ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್6 ವಾಹನಗಳ ವೆಚ್ಚ, ವಾಹನಗಳ ಬಿಡಿ ಭಾಗಗಳ ದರ ಹೆಚ್ಚಳ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸಬೇಕು ಎಂದು ಲಾರಿ ಮಾಲೀಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಾಂಕೇತಿಕವಾಗಿ ಒಂದು ದಿನದ ಮುಷ್ಕರ ನಡೆಸಲಾಗುತ್ತಿದೆ.
ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















