ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021
ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ಶಾಸಕ ಕುಮಾರ್ ಬಂಗಾರಪ್ಪ ನಿರ್ಧರಿಸಿ, ಅಚ್ಚರಿ ಮೂಡಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ತಂಡ ಕುಮಾರ್ ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವೊಲಿಸಿದರು.
ಮನೆಗೆ ದೌಡಾಯಿಸಿದ ರಾಘವೇಂದ್ರ
ಸಂಸದ ಬಿ.ವೈ.ರಾಘವೇಂದ್ರ, ಮೆಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಶಾಸಕ ಕುಮಾರ್ ಬಂಗಾರಪ್ಪ ಅವರ ಮನೆಗೆ ಇವತ್ತು ಬೆಳಗ್ಗೆ ದೌಡಾಯಿಸಿದರು. ಅವರ ಮನವೊಲಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿದರು. ಬಳಿಕ ಎಲ್ಲರೂ ಒಟ್ಟಿಗೆ ಮನೆಯಿಂದ ಹೊರಬಂದು, ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.
ಬಳಿಕ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಯಾವುದೆ ಅಸಮಾಧಾನವಿಲ್ಲ. ಶಿವಮೊಗ್ಗದಲ್ಲಿ ನಡೆಯುವ ನಮ್ಮೊಲುಮೆ ಕಾರ್ಯಕ್ರಮಕ್ಕೆ ಶಾಸಕರ ಕುಮಾರ್ ಬಂಗಾರಪ್ಪ ಅವರನ್ನು ಆಹ್ವಾನಿಸಲು ಮನೆಗೆ ಬಂದಿದ್ದೇವೆ ಎಂದು ತಿಳಿಸಿದರು.
ಶಾಸಕರ ಅಸಮಾಧಾನಕ್ಕೆ ಕಾರಣವೇನು?
ಮೂಗೂರು ಏತ ನೀರಾವರಿ ಯೋಜನೆಯ ಕುರಿತು ಫ್ಲೆಕ್ಸ್ಗಳಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಫೋಟೊ ಬಳಕೆ ಮಾಡಿಲ್ಲ ಎಂದು ಹೇಳಲಾಗಿದೆ. ಈ ನಡುವೆ ನೀರಾವರಿ ನಿಗಮದವರು ತಯಾರಿಸಿರುವ ಕಿರು ಚಿತ್ರದಲ್ಲಿಯೂ ಶಾಸಕರನ್ನು ಕಡೆಗಣಿಸಾಗಿದೆ. ಇದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ಭೇಟಿ ಮೊದಲು ಮುಸುಕಿನ ಗುದ್ದಾಟ
ಸೊರಬ ಬಿಜೆಪಿಯಲ್ಲಿಯಲ್ಲಿನ ಮೂಲ ಮತ್ತು ವಲಸಿಗರ ನಡುವಿನ ಮುಸುಕಿನ ಗುದ್ದಾಟದಿಂದಾಗಿಯೇ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂಲ ಬಿಜೆಪಿಯವರು ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ದೂರವಿಟ್ಟು ಫ್ಲೆಕ್ಸ್ ಪ್ರಟಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






