ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ಪ್ರವಾಸವನ್ನು ರದ್ದುಗೊಳಿಸಿ ಶಿವಮೊಗ್ಗದಲ್ಲಿಯೇ ಉಳಿದುಕೊಂಡಿದ್ದಾರೆ. ಇವತ್ತು ಬೆಳಗ್ಗೆ ಸಿಎಂ ಬೆಂಗಳೂರಿಗೆ ತೆರಳಬೇಕಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೊರಬದ ಆನವಟ್ಟಿಯಲ್ಲಿ ಮೂಗೂರು ಏತ ನೀರಾವರಿ ಯೋಜನೆ ಉದ್ಘಾಟನೆ, ಶಿವಮೊಗ್ಗದಲ್ಲಿ ನಮ್ಮೊಲುಮೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇವತ್ತು ಬೆಳಗ್ಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ, ಬೆಂಗಳೂರಿಗೆ ತೆರಳಬೇಕಿತ್ತು.
ಬೆಂಗಳೂರಿಗೆ ತೆರಳುವ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪ ಅವರು ರದ್ದುಗೊಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇವತ್ತು ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿರುವ ಸಿಎಂ, ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]