ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿರುವ ಹಿನ್ನೆಲೆ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗೋಪಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕರ್ನಾಟಕ ಭವನದಲ್ಲಿ ರಾಸಲೀಲೆ ನಡೆಸಿದ್ದಾರೆ. ಇದರಿಂದ ರಾಜ್ಯದ ಮಾನವನ್ನು ಹರಾಜು ಹಾಕಿದ್ದಾರೆ. ಹಾಗಾಗಿ ಕೂಡಲೆ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಚಿವರ ಫೋಟೊಗೆ ಚಪ್ಪಲಿ ಏಟು
ಪ್ರತಿಭಟನೆ ವೇಳೆ ಸಚಿವ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಚಪ್ಪಲಿ ಏಟು ಕೊಟ್ಟು, ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ರಾಜೀನಾಮೆ ನೀಡುವಂತೆ ಘೋಷಣೆ ಕೂಗಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಉತ್ತರ ಬ್ಲಾಕ್ ಅಧ್ಯಕ್ಷ ಲೋಕೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಪುಷ್ಪಕುಮಾರ್, ಸೈಯದ್ ಜಮೀಲ್, ಅರುಣ್ ಕುಮಾರ್, ಕೆ.ಎಲ್.ಪವನ್, ಮಸ್ತಾನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






