ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021
ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕುಮಟದಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ, ಶಿವಮೊಗ್ಗ ಹೆಲಿಪ್ಯಾಡ್‍ಗೆ ಡಾ. ಅಶ್ವಥ ನಾರಾಯಣ ಅವರು ಆಗಮಿಸಿದ್ದರು. ಈ ವೇಳೆ ಅವರಿಗೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮುತ್ತಿಗೆ ಹಾಕಲು ಮುಂದಾದರು.
ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹೆಲಿಪ್ಯಾಡ್ ಪ್ರವೇಶಿಸದಂತೆ ಗೇಟ್ ಬಂದ್ ಮಾಡಲಾಗಿತ್ತು. ಹಾಗಾಗಿ ಸಾಗರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಗೇಟ್ ಮುಂದೆಯೇ ಮಹಿಳೆಯರು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
