ಶಿವಮೊಗ್ಗ ಲೈವ್.ಕಾಂ | SHIMOGA NEWS | 05 MARCH 2021
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಮಹಾ ಪಂಚಾಯತ್ ಸಮಾವೇಶ ನಡೆಸಲಾಗುತ್ತಿದೆ. ಇದರ ಲಾಂಛನವನ್ನು ಹಿರಿಯ ರೈತ ಮುಖಂಡ ಕಡಿದಾಳು ಶಾಮಣ್ಣ ಬಿಡುಗಡೆ ಮಾಡಿದರು. ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಮಹಾ ಪಂಚಾಯತ್ ನಡೆಯಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರೈತ ಮುಖಂಡ ಕಡಿದಾಳು ಶಾಮಣ್ಣ ಮಾತನಾಡಿ, ರೈತ, ದಲಿತ ಸಂಘಟನೆಗಳು ಒಗ್ಗೂಡಿ ಸಮಾವೇಶ ಮಾಡಲಾಗ್ತಿದೆ. ನನ್ನ ಕನಸು ಈಡೇರಿದೆ. ಚಳವಳಿ ಯಶಸ್ವಿ ಆಗಲಿ. ಹೋರಾಟಕ್ಕೆ ಜಯವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಆರ್ಎಸ್ಎಸ್ ಕೂಡ ನಮ್ಮ ಪರ ಇದೆ
ರೈತ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ರಾಜಕೀಯ ಪಕ್ಷಗಳು ರೈತರನ್ನು ಮತಬ್ಯಾಂಕ್ ಆಗಿ ಪರಿವರ್ತಸಿಕೊಂಡಿದ್ದಾರೆ. ಭೂಮಿ, ಆಹಾರ, ಸಂಗ್ರಹಣೆಯನ್ನು ಖಾಸಗೀಕರಣ ಮಾಡಿ, ಈ ವಿಚಾರಗಳನ್ನು ಭಾರತ ಸರ್ಕಾರ ಚುನಾವಣಾ ವಸ್ತುವನ್ನಾಗಿ ಮಾಡಿಕೊಳ್ಳುತ್ತಿದೆ. ಸರ್ಕಾರ ಬೀಳಿಸಬೇಕು ಅಂತಾ ಹೋರಾಟ ಮಾಡುತ್ತಿಲ್ಲ. ನಮ್ಮ ಹಕ್ಕುಗಳನ್ನ ಜೋಪಾನ ಮಾಡಿಕೊಳ್ಳುತ್ತಿದ್ದೇವೆ. ಆರ್ಎಸ್ಎಸ್ ಕೂಡ ನಮ್ಮ ಪರವಾಗಿದೆ ಎಂದರು.
ಮೋದಿಗೆ ಧನ್ಯವಾದ ಹೇಳುತ್ತೇನೆ
ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಮೋದಿ ಅವರಿಗೆ ಧನ್ಯವಾದ ಹೇಳುತ್ತಿದ್ದೇನೆ. ದೇಶದಲ್ಲಿ ಮತ್ತೊಂದು ರೈತ ಚಳವಳಿ ಹುಟ್ಟಲು ಅವರು ಕಾರಣವಾಗಿದ್ದಾರೆ. ಗುಂಡೂರಾವ್ ಅವರ ಸರ್ಕಾರದ ಅವಧಿಯಲ್ಲಿ ನರಗುಂದ, ನವಲಗುಂದ ಘಟನೆಯಿಂದ ರೈತ ಚಳವಳಿ ಆರಂಭಕ್ಕೆ ಕಾರಣವಾಗಿದ್ದರು. ಆದರೆ ಇವತ್ತು ನಡೆಯುತ್ತಿರುವುದು ಬರೀ ರೈತ ಚಳವಳಿಯಲ್ಲ. ಸಾಮಾನ್ಯ ಜನರೂ ಹೋರಾಟಕ್ಕೆ ಇಳಿದಿದ್ದಾರೆ. ಈಗ ಮೂರು ಕಾಯ್ದೆಗಳು ಜಾರಿಯಾದರೆ ಜನರು ಅನ್ನ ಇಲ್ಲದೆ ಸಾಯುವಂತಾಗುತ್ತದೆ. ಹಾಗಾಗಿ ಎಲ್ಲಾ ಸಮುದಾಯದ ಮಠಗಳು, ಸ್ವಾಮೀಜಿಗಳು, ಜನಪರ ಇರುವವರು ಹೋರಾಟಕ್ಕೆ ಬೆಂಬಲ ನೀಡಬೇಕು. ಈ ಚಳವಳಿಯಲ್ಲಿ ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದರು.
ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ಡಾ. ದರ್ಶನ್ ಪಾಲ್, ಜಗಮೋಹನ್ ಸಿಂಗ್ ಸೇರಿದಂತೆ ಹಲವರು ಮಹಾ ಪಂಚಾಯತ್ನಲ್ಲಿ ಭಾಗವಹಿಸಲಿದ್ದಾರೆ.
ಪ್ರಮುಖರಾದ ಕೆ.ಎಲ್.ಅಶೋಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಕೆ.ಪಿ.ಶ್ರೀಪಾಲ್, ಡಿಎಸ್ಎಸ್ ಮುಖಂಡ ಹಾಲೇಶಪ್ಪ, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರಮೇಶ್ ಹೆಗಡೆ, ವಿಶ್ವನಾಥ ಕಾಶಿ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.