ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 MARCH 2021
ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಸೇರಿದಂತೆ ಎಂಟು ಖಾಸಗಿ ಆಸ್ಪತ್ರೆ ಮತ್ತು 41 ಸರ್ಕಾರಿ ಆಸ್ಪತ್ರೆಯಿಲ್ಲಿ ಮಾರ್ಚ್ 8ರಿಂದ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
ಯಾರೆಗೆಲ್ಲ ಲಸಿಕೆ ನೀಡಲಾಗುತ್ತದೆ?
60 ವರ್ಷ ಮೇಲ್ಪಟ್ಟವರು, 45 ರಿಂದ 59 ವರ್ಷದ ಆರೋಗ್ಯ ತೊಂದರೆ ಇರುವ ಫಲಾನುಭವಿಗಳು ಕೋವಿಡ್ ಲಸಿಕೆ ಪಡೆಯಬಹುದಾಗಿದೆ.
45 ರಿಂದ 59 ವರ್ಷದವರು ತಮಗೆ ಇರುವ ಕಾಯಿಲೆ ಬಗ್ಗೆ ವೈದ್ಯರಿಂದ ಧೃಡೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕಾಗುತ್ತದೆ.
ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಸಹ ಈ ಕೋವಿಡ್ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಎಲ್ಲಾ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಇತರೆ ಯಾವುದೇ ಗುರುತಿನ ಚೀಟಿ ಮತ್ತು ಮೊಬೈಲ್ ತರಬೇಕು.
ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಪ್ರತೀ ಡೋಸ್ ಗೆ 250 ರೂ. ಪಾವತಿಸಿ ಲಸಿಕೆ ಪಡೆಯಬಹುದಾಗಿದೆ.
ಶಿವಮೊಗ್ಗ ಜಿಲ್ಲೆಯ 49 ಕೋವಿಡ್ ಲಸಿಕಾ ಕೇಂದ್ರಗಳು online ನಲ್ಲಿ ಪ್ರಚಾರಪಡಿಸಿದ್ದು cowin app ಅಥವಾ ಆರೋಗ್ಯಸೇತು app ಮೂಲಕ ಹೆಸರು ದಾಖಲಿಸಿಕೊಂಡು ಅಥವಾ ನಿಮ್ಮ ಹತ್ತಿರದ ಆಸ್ಪತ್ರೆಗೆ ತೆರಳಿ ಆನ್ ಸ್ಪಾಟ್ ದಾಖಲಾತಿ ಮಾಡಿಕೊಂಡು ಲಸಿಕೆ ಪಡೆಯಬಹುದು.
ಮಹಿಳೆಯರಿಗೆ ಗುಲಾಬಿ ಬೂತ್
ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ತುಂಗಾನಗರ ಪ್ರಸೂತಿ ಕೇಂದ್ರದಲ್ಲಿ ಮಹಿಳಾ ಫಲಾನುಭವಿಗಳಿಗೆ ಲಸಿಕೆ ನೀಡಲು ಗುಲಾಬಿ ಬೂತ್ (Pink booth ) ತೆರೆಯಲಾಗಿದೆ
ಕೋವಿಡ್ ಲಸಿಕೆಯು ತುಂಬಾ ಸುರಕ್ಷಿತವಾಗಿದ್ದು ಸಾರ್ವಜನಿಕರು ಪ್ರಯೋಜನ ಪಡೆದುಕೊಂಡು ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















