ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ 51 ಹೊಸ ಟಿಪ್ಪರ್ ವಾಹನಗಳಿಗೆ ಚಾಲನೆ ನೀಡಲಾಗಿದೆ. 3.51 ಕೋಟಿ ರೂ. ವೆಚ್ಚದಲ್ಲಿ ಈ ವಾಹನಗಳನ್ನು ಖರೀದಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹಾನಗರ ಪಾಲಿಕೆ ಆವರಣದಲ್ಲಿ ಮೇಯರ್ ಸುವರ್ಣಾ ಶಂಕರ್ ಅವರು ಟಿಪ್ಪರ್ ವಾಹನಗಳಿಗೆ ಚಾಲನೆ ನೀಡಿದರು.
ಸುಂದರ, ಸ್ವಚ್ಛ ಶಿವಮೊಗ್ಗ
ಬಳಿಕ ಮಾತನಾಡಿದ ಮೇಯರ್ ಸುವರ್ಣಾ ಶಂಕರ್ ಅವರು, ಮನೆಗಳಿಂದಲೇ ಹಸಿ ಮತ್ತು ಒಣ ಕಸ ಬೇರ್ಪಡಿಸಿ ವಿಲೇವಾರಿ ಮಾಡುವುದರಿಂದ ಸುಂದರ ಮತ್ತು ಸ್ವಚ್ಛ ಶಿವಮೊಗ್ಗ ನಗರವನ್ನು ನಿರ್ಮಾಣ ಮಾಡಹುದಾಗಿದೆ. ಮೂಲದಲ್ಲೆ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿದರೆ ಸುಂದರ ನಗರ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಡಸ್ಟ್ ಬಿನ್ಗಳಿಗೆ ಟೆಂಡರ್ ಕರೆಯಲಾಗಿದ್ದು ಶೀಘ್ರದಲ್ಲೇ ಮನೆ ಮನೆಗೆ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಹೊರೆ ತಗ್ಗಿಸಲು ಅನುಕೂಲ
ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಮಾತನಾಡಿ, ಸ್ವಚ್ಛ ಭಾರತ ಯೋಜನೆಯಡಿ 51 ಟಿಪ್ಪರ್ ಖರೀದಿಸಲಾಗಿದೆ. ನಗರದ ಪ್ರತಿ ಮನೆಯಿಂದಲೂ ಕಸ ವಿಂಗಡಣೆ ಮಾಡಿ ಕೊಡಬೇಕಿದೆ. ಸದ್ಯ ಅನುಪಿನಕಟ್ಟೆಯ ಕಸ ವಿಲೇವಾರಿ ಕೇಂದ್ರದಲ್ಲಿ 150 ಟನ್ ಸಂಗ್ರಹ ಸಾಮರ್ಥ್ಯವಿದೆ. ಆದರೆ 160 ರಿಂದ 170 ಟನ್ ಕಸ ಸಂಗ್ರಹವಾಗುತ್ತಿದೆ. ಹಸಿ ಮತ್ತು ಒಣ ಕಸ ಬೇರ್ಪಡಿಸುವುದರಿಂದ ಹೊರೆ ತಗ್ಗಲಿದೆ ಎಂದರು.
ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಸದಸ್ಯರಾದ ಎಸ್.ಜ್ಞಾನೇಶ್ವರ್, ಅನಿತಾ ರವಿಶಂಕರ್, ಇ.ವಿಶ್ವಾಸ್, ಸುನಿತಾ ಅಣ್ಣಪ್ಪ, ಶಂಕರ್ ಗನ್ನಿ, ಧೀರರಾಜ್ ಹೊನ್ನವಿಲೆ, ಪ್ರಭಾಕರ್, ಆರ್.ಸಿ.ನಾಯ್ಕ್, ಬಿ.ಎ.ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಪಾಲಿಕೆ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]