ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021
ಮಾಜಿ ಶಾಸಕ ಸಂಗಮೇಶ್ವರ್ ವಿರುದ್ಧ ದೂರು ದಾಖಲಿಸಿರುವುದು ದ್ವೇಷ ರಾಜಕಾರಣ. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಉಗ್ರವಾಗಿ ಪ್ರತಿಭಟನೆ ನಡೆಸುತ್ತದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಎಚ್ಚರಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸ್ವಾತಂತ್ರ್ಯ ನಂತರ ಜಿಲ್ಲೆಯ ಮಟ್ಟಿಗೆ ಇಂತಹ ದ್ವೇಷ ರಾಜಕಾರಣ ನಡೆದಿರಲಿಲ್ಲ ಎಂದು ಆರೋಪಿಸಿದರು.
ಭದ್ರಾವತಿಯಲ್ಲಿ ನಡೆದಿದ್ದು ಸಣ್ಣದೊಂದು ಗಲಾಟೆ. ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಗಲಾಟೆಗೆ ಕಾಂಗ್ರೆಸ್ ಶಾಸಕ ಸಂಗಮೇಶ್ವರ್, ಅವರ ಕುಟುಂಬದವರು ಮತ್ತು ಕಾರ್ಯಕರ್ತರ ವಿರುದ್ಧ ಐಪಿಎಸ್ ಸೆಕ್ಷನ್ 307ರ ಅಡಿ ಪ್ರಕರಣ ದಾಖಲು ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ ಅವರು ಕಾರಣವಲ್ಲವೇ ಎಂದು ಪ್ರಶ್ನಿಸಿದರು.
ಶಾಸಕ ಸಂಗಮೇಶ್ವರ್ ಅವರ ಸಹೋದರ ಜಗನ್ನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಎಸ್.ಯೋಗೇಶ್, ಪ್ರಮುಖರಾದ ವಿಶ್ವನಾಥ ಕಾಶಿ, ಪಲ್ಲವಿ, ಯಮುನಾ ರಂಗೇಗೌಡ, ಚಂದ್ರಭೂಪಾಲ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]