ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 9 MARCH 2021
ಬ್ಯಾಂಕ್ನಿಂದ ಯಾವುದೆ ಮೆಸೇಜ್ ಬರದೆ ವ್ಯಕ್ತಿಯೊಬ್ಬರ ಖಾತೆಯಿಂದ 2.09 ಲಕ್ಷ ರೂ. ಹಣ ಕಣ್ಮರೆಯಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಏನಿದು ಪ್ರಕರಣ?
ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಜಯ್ ಕುಮಾರ್ ಸಿಂಗ್ ಅವರ ಖಾತೆಯಿಂದ ಹಣ ಮಾಯವಾಗಿದೆ. ಇವರು ತಮ್ಮ ತಾಯಿ ಜೊತೆಗೆ ಜಾಯಿಂಟ್ ಅಕೌಂಟ್ ಹೊಂದಿದ್ದಾರೆ. ಉತ್ತರ ಪ್ರದೇಶದ ಲಕ್ನೋನದಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಖಾತೆ ಇದೆ.
ಇತ್ತೀಚೆಗೆ ಖಾತೆಯನ್ನು ಪರಿಶೀಲಿಸುತ್ತಿದ್ದಾಗ ಹಣ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ. ಜನವರಿ 7 ರಿಂದ ಫೆಬ್ರವರಿ 20ರ ನಡುವೆ 2.09 ಲಕ್ಷ ರೂ. ಹಣ ಕಟ್ ಆಗಿದೆ. ಇದರ ಕುರಿತು ಯಾವುದೆ ಮೆಸೇಜು ಮೊಬೈಲ್ಗೆ ಬಂದಿಲ್ಲ. ಆದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಜಯ್ ಕುಮಾರ್ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]