ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021
ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಹೆಚ್ಚಳಕ್ಕೆ ಶಿವಮೊಗ್ಗ ಜಿಲ್ಲಾಡಳಿತ ನಿರ್ಧರಿಸಿದೆ. ಸದ್ಯ 41 ಪ್ರಾಥಮಿಕ ಆರೋಗ್ಯ ಕೇಂದ್ರ, ಎಂಟು ಖಾಸಗಿ ಅಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಸಂಖ್ಯೆ ಹೆಚ್ಚಳಕ್ಕೆ ಯೋಜಿಸಲಾಗಿದೆ.
ಆಸ್ಪತ್ರೆಗಳ ಸಂಖ್ಯೆ ಹೆಚ್ಚಳಕ್ಕೇನು ಕಾರಣ?
ಹೆಚ್ಚು ಜನರಿಗೆ ಕೋವಿಡ್ ಲಸಿಕೆ ಪೂರೈಕೆ ಮಾಡುವ ಉದ್ದೇಶದಿಂದ ಲಸಿಕಾ ವಿತರಣೆ ಕೇಂದ್ರಗಳನ್ನು ಹೆಚ್ಚಳ ಮಾಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ದೂರದ ಕೇಂದ್ರಗಳಿಗೆ ಹೋಗಬೇಕಾಗಿದೆ. ಹಾಗಾಗಿ ಹೆಚ್ಚಿವರು ಲಸಿಕಾ ಕೇಂದ್ರಗಳತ್ತ ಆಗಮಿಸುತ್ತಿಲ್ಲ. ಇದೇ ಕಾರಣಕ್ಕೆ ಲಸಿಕಾ ಕೇಂದ್ರಗಳನ್ನು ಹೆಚ್ಚಿಸಲು ಯೋಜಿಸಲಾಗುತ್ತಿದೆ.
ನೂರರ ಸನಿಹಕ್ಕೆ ಲಸಿಕಾ ವಿತರಣಾ ಕೇಂದ್ರ
ಮಾರ್ಚ್ 1ರಿಂದ ಸಾರ್ವಜನಿಕರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಮಾರ್ಚ್ 8ರಿಂದ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ವಿತರರಣೆ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ | ನಂಜಪ್ಪ ಆಸ್ಪತ್ರೆ ಸೇರಿ ಎಂಟು ಖಾಸಗಿ, 41 ಸರ್ಕಾರಿ ಆಸ್ಪತ್ರೆಯಲ್ಲಿ ನಾಳೆಯಿಂದ ಕೋವಿಡ್ ಲಸಿಕೆ, ಯಾರಿಗೆಲ್ಲ ಸಿಗುತ್ತೆ ಲಸಿಕೆ?
ಈಗ ಇರುವ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಯೋಜಿಸಲಾಗಿದೆ. ಜಿಲ್ಲೆಯ 33 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಲಸಿಕೆ ವಿತರಣೆ ಮಾಡಲಾಗುತ್ತದೆ. 93 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲು ಪ್ಲಾನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ತಿಳಿಸಿದ್ದಾರೆ.
ಎರಡು ತಿಂಗಳು ಬರಿ ವಾರಿಯರ್ಸ್ಗೆ ಲಸಿಕೆ
ಶಿವಮೊಗ್ಗದಲ್ಲಿ ಜನವರಿ ತಿಂಗಳಿಂದ ಕೋವಿಡ್ ಲಸಿಕೆ ವಿತರಣೆ ಆರಂಭವಾಯಿತು. ಆರಂಭದ ಎರಡು ತಿಂಗಳು ಕರೋನ ವಾರಿಯರ್ಸ್, ಫ್ರಂಟ್ ಲೈನ್ ವಾರಿಯರ್ಸ್ಗೆ ಲಸಿಕೆ ವಿತರಣೆ ಆರಂಭವಾಯಿತು.
ಶೇ.121ರಷ್ಟು ಫ್ರಂಟ್ ಲೈನ್ ವಾರಿಯರ್ಸ್, ಶೇ.69ರಷ್ಟು ಕರೋನ ವಾರಿಯರ್ಸ್ಗೆ ಲಸಿಕೆ ನೀಡುವ ಗುರಿ ಸಾಧಿಸಲಾಗಿದೆ ಎಂದು ಡಾ.ರಾಜೇಶ ಸುರಗೀಹಳ್ಳಿ ತಿಳಿಸಿದ್ದಾರೆ.
ಮನೆ ಮನೆಯ ಸರ್ವೆ ಕಾರ್ಯ
60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕಿದೆ. ಆದರೆ ಅಡ್ಡಪರಿಣಾಮದ ಭೀತಿ, ಲಸಿಕಾ ಕೇಂದ್ರ ದೂರದಲ್ಲಿದೆ ಎಂಬ ಕಾರಣಕ್ಕೆ, ಹಲವರು ಲಸಿಕೆ ಹಾಕಿಸಿಕೊಂಡಿಲ್ಲ. ಇದೇ ಕಾರಣಕ್ಕೆ ಮನೆ ಮನೆ ಸರ್ವೆ ನಡೆಸಲು ನಿರ್ಧರಿಸಲಾಗಿದೆ. ‘ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಂದ ಸರ್ವೆ ಮಾಡಿಸಲಾಗುತ್ತದೆ. ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮೋಟಿವೇಟ್ ಮಾಡಲಾಗುತ್ತದೆ’ ಎಂದು ಡಾ.ರಾಜೇಶ್ ಸುರಗೀಹಳ್ಳಿ ತಿಳಿಸಿದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






